ಶಿವಮೊಗ್ಗ: ಕೇಂದ್ರ ಕಾರಾಗೃಹದಲ್ಲಿದ್ದ ವಿಚಾರಣಾಧೀನ ಕೈದಿ ಸಾವು
ಶಿವಮೊಗ್ಗ: ವಿಚಾರಣಾಧೀನ ಕೈದಿ ಸಾವನ್ನಪ್ಪಿದ ಘಟನೆ ಶಿವಮೊಗ್ಗದ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ.
ಆರೋಪಿ ಕಲೀಂ (37) ಮೃತಪಟ್ಟ ಕೈದಿ. ಈತನನ್ನು ಕಳೆದ ಒಂದು ತಿಂಗಳ ಹಿಂದೆ ಪೋಕ್ಸೋ ಕಾಯ್ದೆಯಡಿ ಬಂಧಿಸಲಾಗಿತ್ತು.
ಕಲೀಂ ಕಿಡ್ನಿ ಸಮಸ್ಯೆ, ಲೋ ಬಿಪಿ, ವಾಂತಿ ಮತ್ತು ಭೇದಿಯಿಂದ ಬಳಲುತ್ತಿದ್ದ. ಅನಾರೋಗ್ಯ ಉಂಟಾದ ಹಿನ್ನೆಲೆಯಲ್ಲಿ ಶನಿವಾರ ರಾತ್ರಿ ಈತನನ್ನು ನಗರದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾನೆ.
ಕಲೀಂ ಸಾವಿನ ಬಗ್ಗೆ ಆತನ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ್ದು, ಜೈಲಿನಲ್ಲಿ ಹಲ್ಲೆ ಮಾಡಿ ಕೊಲೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.




