BJP ಅಧಿಕಾರಕ್ಕೆ ಬಂದರೆ ಶೇ.4ರಷ್ಟು ಮುಸ್ಲಿಂ ಮೀಸಲಾತಿ ರದ್ದು: ಅಮಿತ್ ಶಾ
ಹೈದರಾಬಾದ್: ತೆಲಂಗಾಣದಲ್ಲಿ ಬಿಜೆಪಿ ಸರ್ಕಾರ ರಚಿಸಿದರೆ ಮುಸ್ಲಿಮರಿಗೆ ಮೀಸಲಾತಿಯನ್ನು ರದ್ದುಪಡಿಸುವುದಾಗಿ ಕೇಂದ್ರ ಸಚಿವ ಅಮಿತ್ ಶಾ ಭಾನುವಾರ ಹೇಳಿದ್ದಾರೆ.
ಹೈದರಾಬಾದ್ ಬಳಿಯ ಚೆವೆಲ್ಲಾದಲ್ಲಿ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅಮಿತ್ ಶಾ, ಧರ್ಮ ಆಧಾರಿತ ಮೀಸಲಾತಿಗಳನ್ನು ಅಸಂವಿಧಾನಿಕ ಎಂದು ಕರೆದರು.
ತೆಲಂಗಾಣದಲ್ಲಿ ಪಕ್ಷ ಅಧಿಕಾರಕ್ಕೆ ಬಂದರೆ ಶೇ.4ರಷ್ಟು ಮುಸ್ಲಿಂ ಕೋಟಾವನ್ನು ರದ್ದುಪಡಿಸಲಿದ್ದು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಹಿಂದುಳಿದ ಸಮುದಾಯಗಳಿಗೆ ಹಕ್ಕು ನೀಡಲಿದೆ ಎಂದರು. “ಇದು ಪರಿಶಿಷ್ಟ ಜಾತಿಗಳು, ಪರಿಶಿಷ್ಟ ಪಂಗಡಗಳು ಮತ್ತು ಒಬಿಸಿಗಳ ಹಕ್ಕು” ಎಂದು ಶಾ ಹೇಳಿದರು.




