February 2, 2026

ಮಂಗಳೂರು: ಬೆದರಿಕೆ ಹಿನ್ನಲೆ ನಾಮಪತ್ರ ಹಿಂತೆಗೆಸಿಕೊಳ್ಳಲಾಗಿದೆ: ಸುದ್ದಿಗೋಷ್ಠಿಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿದ್ದ ಅಲ್ತಾಫ್ ಸ್ಪಷ್ಟನೆ

0
IMG-20230424-WA0032.jpg

ಮಂಗಳೂರು: ನನ್ನನ್ನು ಬೇರೊಂದು ಪಕ್ಷದ ತಂಡವೊಂದು ಅಪಹರಿಸಿ ಕರೆದೊಯ್ದು ಬಲವಂತವಾಗಿ ನಾಮಪತ್ರ ಹಿಂತೆಗೆಯುವಂತೆ ಮಾಡಿದ್ದಾರೆ ಎಂದು ಮಂಗಳೂರು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿದ್ದ ಅಲ್ತಾಫ್ ಕುಂಪಲ ಆರೋಪಿಸಿದ್ದಾರೆ.

ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಎಲ್ಲೂ ಓಡಿಹೋಗಿಲ್ಲ, ನನ್ನನ್ನು ಅಪಹರಿಸಿ ಬೆದರಿಸಿ ನನ್ನಿಂದ ನಾಮಪತ್ರ ಹಿಂದೆ ಪಡೆಯುವಂತೆ ಮಾಡಲಾಗಿದೆ. ನನಗೆ ಯಾವುದೇ ರೀತಿಯಲ್ಲಿ ಆಮಿಷ ಒಡ್ಡಲಾಗಿಲ್ಲ. ಈ ಕುರಿತು ಪೊಲೀಸ್ ಕಮಿಷನರ್ ಅವರಿಗೆ ಭದ್ರತೆ ನೀಡುವಂತೆ ಮನವಿ ಮಾಡಲಾಗಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಜೆಡಿಎಸ್ ರಾಜ್ಯ ವಕ್ತಾರ‌ ಎಂ.ಬಿ. ಸದಾಶಿವ, ಪಕ್ಷದ ಪ್ರಮುಖರಾದ ನಜೀರ್ ಉಳ್ಳಾಲ್, ವಸಂತ ಪೂಜಾರಿ, ಅಶ್ರಫ್ ಸಾಜೀದ್, ಅಶ್ರಫ್ ಖಾಯಿ, ಯುವ ಜನತಾದಳದ ಜಿಲ್ಲಾಧ್ಯಕ್ಷ ಅಕ್ಷಿತ್ ಸುವರ್ಣ ಇದ್ದರು.

ಮಂಗಳೂರು(ಉಳ್ಳಾಲ)ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್‌ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಎಸ್‌ಎಸ್‌ಎಫ್‌ ಮುಖಂಡ ಅಲ್ತಾಫ್‌ ಕುಂಪಲ ಪಕ್ಷದ ನಾಯಕರಿಗೆ ಮಾಹಿತಿ ನೀಡದೆ ನಾಮಪತ್ರ ಹಿಂಪಡೆದಿದ್ದರು.

Leave a Reply

Your email address will not be published. Required fields are marked *

error: Content is protected !!