February 2, 2026

ಉಪ್ಪಳ: ರೈಲಿನಿಂದ ಎಸೆಯಲ್ಪಟ್ಟು ಯುವಕ ಮೃತ್ಯು

0
20230424_203651.jpg

ಕಾಸರಗೋಡು: ರೈಲಿನಿಂದ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ಸೋಮವಾರ ಬೆಳಿಗ್ಗೆ ಉಪ್ಪಳ ಪೆರಿಂಗಡಿಯಲ್ಲಿ ನಡೆದಿದೆ.

ಪಾಲಕ್ಕಾಡ್ ನ ಸಾಬೀರ್(32) ಮೃತ ಯುವಕ.

ಸ್ನೇಹಿತನ ಜೊತೆ ಗೋವಾಕ್ಕೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಗೋವಾಕ್ಕೆ ತಲಪಿದಾಗ ಸಾಬೀರ್ ನಾಪತ್ತೆಯಾಗಿದ್ದು , ಈ ಬಗ್ಗೆ ಸ್ನೇಹಿತನು ಗೋವಾ ಪೊಲೀಸರಿಗೆ ದೂರು ನೀಡಿದ್ದರು. ಗೋವಾ ಪೊಲೀಸರು ಕೇರಳ ಮತ್ತು ಕರ್ನಾಟಕ ಪೊಲೀಸರಿಗೆ ಮಾಹಿತಿ ನೀಡಿದ್ದು, ಬಳಿಕ ಕುಂಬಳೆ ಪೊಲೀಸ್ ಠಾಣೆ ಯ ಪೆರಿಂಗಡಿಯ ರೈಲ್ವೆ ಹಳಿ ಬಳಿ ಮೃತದೇಹ ಪತ್ತೆಯಾಗಿದೆ. ಮೃತದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಯಲ್ಲಿರಿಸಲಾಗಿದ್ದು, ಸಂಬಂಧಿಕರು ಆಗಮಿಸಿದ ಬಳಿಕ ಬಿಟ್ಟುಕೊಡಲಿದೆ.

ರೈಲಿನಿಂದ ಹೊರಕ್ಕೆಸೆಯಲ್ಪಟ್ಟು ಘಟನೆ ನಡೆದಿರಬಹುದು ಎಂದು ಪೊಲೀಸರು ಸಂಶಯಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!