July 6, 2026

ಬೆಂಗಳೂರಿನಲ್ಲಿ ಕಾರು, ಬೈಕ್‌ ಅಪಘಾತ: ಸುಳ್ಯದ ಯುವಕ ಮೃತ್ಯು

0
image_editor_output_image1475716932-1682398828052.jpg

ಸುಳ್ಯ: ಬೆಂಗಳೂರಿನಲ್ಲಿ ನಡೆದ ಕಾರು ಹಾಗೂ ಬೈಕ್‌ ಅಪಘಾತದಲ್ಲಿ ಸುಳ್ಯ ತಾಲೂಕಿನ ಕೊಲ್ಲಮೊಗ್ರುವಿನ ಯುವಕ ಮೃತಪಟ್ಟ ಘಟನೆ ಏ.೨೪ರ ಸೋಮವಾರ ಬೆಳಗ್ಗೆ ನಡೆದಿದೆ.

ಸುಳ್ಯ ತಾಲೂಕಿನ ಕೊಲ್ಲಮೊಗ್ರು ಧರ್ಮಪಾಲ ಗೌಡ ಬಾಳೆಬೈಲು ಮತ್ತು ಕಮಲಾಕ್ಷಿ ದಂಪತಿ ಪುತ್ರ ಯತೀಶ್‌ ಬಾಳೆಬೈಲು (30) ಮೃತ ಯುವಕ. ಯತೀಶ್‌ ಅವರು ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಕಾರು ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಯತೀಶ್‌ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫ‌ಲಿಸದೆ ಮೃತರಾಗಿದ್ದಾರೆ. ಅವಿವಾಹಿತರಾಗಿರುವ ಯತೀಶ್‌ ಅವರು ಬೆಂಗಳೂರಿನ ವಿಮಾನ ನಿಲ್ದಾಣ ಬಳಿ ಉದ್ಯೋಗದಲ್ಲಿದ್ದರು. ಮೃತರು ತಂದೆ, ತಾಯಿ, ಸಹೋದರ, ಸಹೋದರಿಯನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!