ಮಂಗಳೂರು: ಪುತ್ರಿಯರ ಮೇಲೆ ಅತ್ಯಾಚಾರ ಪ್ರಕರಣ, ಆರೋಪಿ ತಂದೆಯನ್ನು ಖುಲಾಸೆಗೊಳಿಸಿದ ಕೋರ್ಟ್
ಮಂಗಳೂರು: ತಮ್ಮ ತಂದೆಯ ವಿರುದ್ದ ಪುತ್ರಿಯರು ಆರೋಪ ಮಾಡಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯನ್ನು ಖುಲಾಸೆಗೊಳಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ.
ಕಾಟಿಪಳ್ಳದ ನಿವಾಸಿ ಅಬ್ದುಲ್ ಹಕೀಂ(48) ಖುಲಾಸೆಗೊಂಡ ಆರೋಪಿ. ತಾವು ಅಪ್ರಾಪ್ತರಾಗಿದ್ದ ಸಂದರ್ಭದಲ್ಲಿ ತಮ್ಮ ಮೇಲೆ ತಂದೆ ಅತ್ಯಾಚಾರ ಎಸಗಿರುವ ಬಗ್ಗೆ ಇಬ್ಬರು ಮಕ್ಕಳು ಮಂಗಳೂರಿನ ಮಹಿಳಾ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲಿಸಿದ್ದರು.
ಈ ಪೈಕಿ ಕಿರಿಯ ಮಗಳ ಆರೋಪ ಪ್ರಕರಣದಲ್ಲಿ ನ್ಯಾಯಾಲಯ ಎರಡು ತಿಂಗಳ ಹಿಂದೆ ಆರೋಪಿಯನ್ನು ಖುಲಾಸೆಗೊಳಿಸಿತ್ತು. ಹಿರಿಯ ಮಗಳ ಆರೋಪಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರಿನ ಹೆಚ್ಚುವರಿ ಸತ್ರ ಮತ್ತು ಎರಡನೇ ಎಫ್ಟಿಎಸ್‌ಸಿ ಪೋಕ್ಸೋ ನ್ಯಾಯಾಲಯದ ನ್ಯಾಯಾಧೀಶರಾದ ಕೆ.ಎಂ.ರಾಧಾಕೃಷ್ಣ ಅವರು ವಿಚಾರಣೆ ನಡೆಸಿ ಆರೋಪಿಯ ಮೇಲೆ ಆರೋಪ ಸಾಬೀತು ಮಾಡಲು ಯಾವುದೇ ಸರಿಯಾದ ಸಾಕ್ಷ್ಯಾಧಾರಗಳು ಇಲ್ಲ ಎಂದು ನಿರ್ಧರಿಸಿ ಆರೋಪಿಯನ್ನು ಬಿಡುಗಡೆ ಮಾಡಲು ಆದೇಶ ನೀಡಿದ್ದಾರೆ.




