ಪುತ್ತೂರು: ನವವಿವಾಹಿತೆ ಯುವತಿ ಆತ್ಮಹತ್ಯೆ
ಪುತ್ತೂರು: ನವವಿವಾಹಿತೆಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ರಾತ್ರಿ ಕೆದಿಲದಲ್ಲಿ ನಡೆದಿದೆ.
ಕೆಮ್ಮಿಂಜೆ ನಿವಾಸಿ ಪ್ರಶಾಂತ್ ಎಂಬವರ ಪತ್ನಿ ಹರ್ಷಿತಾ (28) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡವರು ಎಂದು ತಿಳಿದುಬಂದಿದೆ.
ಕಳೆದ 2 ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದು, ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ತನ್ನ ಸಾವಿಗೆ ಯಾರೂ ಕಾರಣರಲ್ಲ ಎಂದು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.




