July 6, 2026

ನೆಲ್ಯಾಡಿ: ಕಾಲೇಜು ವಿದ್ಯಾರ್ಥಿನಿ ಮೃತ್ಯು

0
image_editor_output_image807268345-1682486881081.jpg

ನೆಲ್ಯಾಡಿ: ಅನಾರೋಗ್ಯದಿಂದ ಕಾಲೇಜು ಮೃತಪಟ್ಟ ಘಟನೆ ನೆಲ್ಯಾಡಿಯಲ್ಲಿ ನಡೆದಿದೆ.

ಮಂಗಳೂರು ವಿವಿ ಕಾಲೇಜಿನಲ್ಲಿ ಪ್ರಥಮ ಬಿ.ಎ. ವಿದ್ಯಾರ್ಥಿನಿ ಗೋಳಿತ್ತೊಟ್ಟು ಗ್ರಾಮದ ಜನತಾ ಕಾಲೋನಿ ನಿವಾಸಿ ದಿ.ಸುಂದರ ಪೂಜಾರಿ ಹಾಗೂ ಲೀಲಾವತಿ ದಂಪತಿ ಪುತ್ರಿ ಮಮತಾ(18) ಮೃತ ದುರ್ದೈವಿ.

ಮಮತಾ ಅವರು ಕಳೆದ ಕೆಲ ಸಮಯಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು ಎ.25ರಂದು ಬೆಳಿಗ್ಗೆ, ಅವರ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡಿತ್ತು.

ಮನೆಯವರು ನೆಲ್ಯಾಡಿ ಸರಕಾರಿ ಆಸ್ಪತ್ರೆಗೆ ಕರೆದೊಯ್ದು ಬಳಿಕ ಅಲ್ಲಿನ ವೈದ್ಯರ ಸೂಚನೆಯಂತೆ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿನ ಸರಕಾರಿ ಆಸ್ಪತ್ರೆಗೆ ಕರೆತಂದಿದ್ದರು. ಆದರೆ ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟರು ಎಂದು ವರದಿಯಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!