ಕಡಬ: ಕಲ್ಲಂತಡ್ಕದಲ್ಲಿ ಬೈಕ್ ಸ್ಕಿಡ್: ಸವಾರ ಸ್ಥಳದಲ್ಲೇ ಮೃತ್ಯು
ಕಡಬ : ಬೈಕೊಂದು ಸ್ಕಿಡ್ ಆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಕಡಬ–ಪಂಜ ರಸ್ತೆಯ ಕಲ್ಲಂತಡ್ಕ ಎಂಬಲ್ಲಿ ನಡೆದಿದೆ.
ಮೃತ ಸವಾರನನ್ನು ದಾವಣಗೆರೆ ಮೂಲದ ಪ್ರಸ್ತುತ ಕೋಡಿಂಬಾಳದಲ್ಲಿ ವಾಸವಿರುವ ಮಂಜು ಎಂದು ಗುರುತಿಸಲಾಗಿದೆ.
ಸೆಂಟ್ರಿಂಗ್ ಕೆಲಸ ನಿರ್ವಹಿಸುತ್ತಿದ್ದ ಮಂಜು ಬೈಕಿನಲ್ಲಿ ಕೋಡಿಂಬಾಳ ಕಡೆಗೆ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಬೈಕ್ ರಸ್ತೆಗೆ ಉರುಳಿ ಬಿದ್ದಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡ ಮಂಜು ಸ್ಥಳದಲ್ಲೇ ಮೃತಪಟ್ಟಿದ್ದಾರೆ.




