February 3, 2026

ಉಡುಪಿ: ಶಾಲಾ ಶಿಕ್ಷಕಿ ನೇಣುಬಿಗಿದು ಆತ್ಮಹತ್ಯೆ

0
image_editor_output_image-1012970626-1637643469177.jpg

ಉಡುಪಿ: ಶಾಲಾ ಶಿಕ್ಷಕಿಯೊಬ್ಬರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನ. 21 ರ ಭಾನುವಾರ ರಾತ್ರಿ ಅಲೆವೂರಿನಲ್ಲಿ ನಡೆದಿದೆ. ಅಮೃತಾ (32) ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕಿ.

ಅಮೃತಾ ಅವರು ಸುಮಾರು 8 ವರ್ಷದಿಂದ ಉಡುಪಿಯ ವಿದ್ಯೋದಯ ಪಬ್ಲಿಕ್‌ ಸ್ಕೂಲ್‌ನಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಇತ್ತೀಚೆಗೆ ಮಾನಸಿಕ ಒತ್ತಡದಿಂದ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ. ಭಾನುವಾರದಂದು ರಾತ್ರಿ ತಾನು ವಾಸವಿದ್ದ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಮೃತರು ಪತಿ ಹಾಗೂ ಮೂವರು ಮಕ್ಕಳನ್ನು ಅಗಲಿದ್ದಾರೆ.

ಈ ಬಗ್ಗೆ ಮೃತರ ತಂದೆ ನೀಡಿದ ದೂರಿನಂತೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!