March 19, 2026

ಶಿವಮೊಗ್ಗ: ಭದ್ರಾವತಿ ಬಳಿ ಖಾಸಗಿ ಬಸ್ ಪಲ್ಟಿ: 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

0
image_editor_output_image-1565501733-1682572618596.jpg

ಶಿವಮೊಗ್ಗ: ಜಿಲ್ಲೆಯ ಭದ್ರಾವತಿ ಬಳಿ ಖಾಸಗಿ ಬಸ್ ಪಲ್ಟಿಯಾಗಿ 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿರುವ ಘಟನೆ ನಡೆದಿದೆ.

ಕೂಡಲೇ ಗಾಯಾಳುಗಳನ್ನ ಜಿಲ್ಲೆಯ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಖಾಸಗಿ ಬಸ್ ಇದಾಗಿದ್ದು, ಚಾಲಕನ ನಿಯಂತ್ರಣ ತಪ್ಪಿ ತಿರುವಿನಲ್ಲಿ ಬಸ್ ಪಲ್ಟಿಯಾಗಿದೆ.

ಅದೃಷ್ಟವಶಾತ್ ಚಾಲಕ ಸೇರಿ ಬಸ್ನಲ್ಲಿದ್ದ30ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!