March 19, 2026

ಗೀತಾ ಶಿವರಾಜ್ ಕುಮಾರ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

0
14BGGEETHASHIVARAJKUMAR.jpeg

ಬೆಂಗಳೂರು: ರಾಜ್ಯದಲ್ಲಿ ಮಹತ್ವದ ರಾಜಕೀಯ ವಿದ್ಯಮಾನ ಎನ್ನುವಂತೆ ನಾಳೆ ಕೆಪಿಸಿಸಿ ಕಚೇರಿಯಲ್ಲಿ ಮಾಜಿ ಸಿಎಂ ದಿವಂಗತ ಎಸ್ ಬಂಗಾರಪ್ಪ ಅವರ ಪುತ್ರಿ, ನಟ ಶಿವರಾಜ್ ಕುಮಾರ್ ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಗೊಳ್ಳಲಿದ್ದಾರೆ.

ಈ ಕುರಿತಂತೆ ಕೆಪಿಸಿಸಿ ಕಚೇರಿಯಿಂದ ಅಧಿಕೃತ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ನಾಳೆ ಮಾಜಿ ಸಿಎಂ ದಿವಂಗತ ಎಸ್ ಬಂಗಾರಪ್ಪನವರ ಪುತ್ರಿ ಗೀತಾ ಶಿವರಾಜ್ ಕುಮಾರ್, ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಲಿದ್ದಾರೆ ಎಂದು ತಿಳಿಸಿದೆ.

ಗೀತಾ ಶಿವರಾಜ್ ಕುಮಾರ್ ಈ ಹಿಂದೆ ಜೆಡಿಎಸ್ ಪಕ್ಷದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ್ದರು. ಇದೀಗ ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷವನ್ನು ನಾಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಸೇರ್ಪಡೆಗೊಳ್ಳಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!