March 19, 2026

ಚೀನಾ ರಕ್ಷಣಾ ಸಚಿವರೊಂದಿಗೆ ಕೇಂದ್ರ ಸಚಿವ ರಾಜನಾಥ್ ಸಿಂಗ್ ಮಾತುಕತೆ

0
PTI04-27-2023-000290B-0_1682606456237_1682606481895.jpg

ನವ ದೆಹಲಿ: 2020 ರಲ್ಲಿ ಲಡಾಖ್‌ನ ಗಾಲ್ವಾನ್ ಕಣಿವೆಯಲ್ಲಿ ಉಭಯ ರಾಷ್ಟ್ರಗಳ ಸೈನಿಕರು ಘರ್ಷಣೆ ಬಳಿಕ ಮೊದಲ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಚೀನಾದ ಸಹವರ್ತಿ ಜನರಲ್ ಲಿ ಶಾಂಗ್‌ಫು ಅವರೊಂದಿಗೆ ಮಹತ್ವದ ಮಾತುಕತೆ ನಡೆಸಿದ್ದಾರೆ.

ಇಂದು ರಾಷ್ಟ್ರ ರಾಜಧಾನಿ ದೆಹಯಲ್ಲಿ ಶಾಂಘೈ ಸಹಕಾರ ಸಂಸ್ಥೆ (SCO) ರಕ್ಷಣಾ ಮಂತ್ರಿಗಳ ಮಹತ್ವದ ಸಭೆ ನಡೆಸಿತ್ತು.

ಭಾರತ-ಚೀನಾ ಗಡಿ ಪ್ರದೇಶಗಳಲ್ಲಿನ ಬೆಳವಣಿಗೆಗಳು ಮತ್ತು ದ್ವಿಪಕ್ಷೀಯ ಸಂಬಂಧಗಳ ಬಗ್ಗೆ ಉಭಯ ಸಚಿವರು ಸ್ಪಷ್ಟವಾದ ಚರ್ಚೆ ನಡೆಸಿದರು ಎಂದು ರಕ್ಷಣಾ ಸಚಿವಾಲಯವು ಸಭೆಯ ನಂತರ ಹೇಳಿಕೆಯಲ್ಲಿ ತಿಳಿಸಿದೆ.

ಭಾರತ ಮತ್ತು ಚೀನಾ ನಡುವಿನ ಸಂಬಂಧಗಳ ಅಭಿವೃದ್ಧಿಯು ಗಡಿಯಲ್ಲಿ ಶಾಂತಿ ಮತ್ತು ನೆಮ್ಮದಿಯ ಪ್ರಾಬಲ್ಯವನ್ನು ಆಧರಿಸಿದೆ. ಜಾರಿಯಲ್ಲಿರುವ ದ್ವಿಪಕ್ಷೀಯ ಒಪ್ಪಂದಗಳು ಮತ್ತು ಬದ್ಧತೆಗಳಿಗೆ ಅನುಗುಣವಾಗಿ ಗಡಿಯಲ್ಲಿನ ಎಲ್ಲಾ ಸಮಸ್ಯೆಗಳನ್ನು ಪರಿಹರಿಸಬೇಕಾಗಿದೆ ಎಂದು ರಾಜನಾಥ್ ಸಿಂಗ್ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!