ಬ್ರೇಕ್ ಫೇಲ್ ಆದ ಟ್ರಕ್: 12 ಕಾರುಗಳು ಜಖಂ
ಮುಂಬೈ: ಟ್ರಕ್ ಒಂದರ ಬ್ರೇಕ್ ಫೇಲ್ ಆದ ಪರಿಣಾಮ ಇತರ ವಾಹನಗಳಿಗೆ ಡಿಕ್ಕಿ ಹೊಡೆದು 12 ಕಾರುಗಳು ನಜ್ಜುಗುಜ್ಜಾಗಿರುವ ಘಟನೆ ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇನಲ್ಲಿ ಗುರುವಾರ ನಡೆದಿದೆ.
ಘಟನೆಯಲ್ಲಿ ನಾಲ್ವರಿಗೆ ಗಾಯಗಳಾಗಿದ್ದು ಸದ್ಯ ಯಾವುದೇ ಪ್ರಾಣಹಾನಿಯಾಗಿಲ್ಲ ಎಂದು ವರದಿಗಳು ತಿಳಿಸಿವೆ.
ಮಹಾರಾಷ್ಟ್ರದ ಖೋಪೋಲಿ ಬಳಿ ಅಪಘಾತ ನಡೆದಿದೆ. ಎಕ್ಸ್‌ಪ್ರೆಸ್‌ವೇನಲ್ಲಿ ಚಳಿಸುತ್ತಿದ್ದ ಸಂದರ್ಭ ಟ್ರಕ್‌ನ ಬ್ರೇಕ್ ಫೇಲ್ ಆಗಿದೆ.
ಪರಿಣಾಮ ಟ್ರಕ್ 12 ಕಾರುಗಳಿಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಸುಮಾರು 7-8 ಕಾರುಗಳು ಒಂದಕ್ಕೊಂದು ಡಿಕ್ಕಿ ಹೊಡೆದಿವೆ ಎನ್ನಲಾಗಿದೆ.




