ಮೈಸೂರು: ಬಿಜೆಪಿ ಮುಖಂಡನ ಮೇಲೆ ಕಾಂಗ್ರೆಸ್ ಕಾರ್ಯಕರ್ತರಿಂದ ಹಲ್ಲೆ
ಮೈಸೂರು: ವರುಣ ಕ್ಷೇತ್ರದ ಸಿದ್ದರಾಮನಹುಂಡಿ ಗ್ರಾಮದಲ್ಲಿ ಗುರುವಾರ ನಡೆದ ಗಲಾಟೆಯಲ್ಲಿ ಗಾಯಗೊಂಡು ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಿಜೆಪಿ ಕಾರ್ಯಕರ್ತ ನಾಗೇಶ್ ಅವರ ಆರೋಗ್ಯವನ್ನು ಪಕ್ಷದ ಅಭ್ಯರ್ಥಿ ವಿ.ಸೋಮಣ್ಣ ಶುಕ್ರವಾರ ವಿಚಾರಿಸಿ, ಧೈರ್ಯ ತುಂಬಿದರು.
ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಸಿದ್ದರಾಮಯ್ಯ ಅವರ ಅಣ್ಣನ ಮನೆ ಮುಂದೆಯೇ ಈ ಗಲಾಟೆ ನಡೆಯಿತು. ಹತಾಶ ಮನೋಭಾವದಿಂದ, ಸೋಲಿನ ಭಯದಿಂದ ಈ ಕೆಲಸ ಮಾಡಿದ್ದಾರೆ. ನಾನು ಎಲ್ಲಿ ಹೋಗುತ್ತೇನೆಯೋ ಅಲ್ಲಿಗೆ ಕೆಲವರು ಬರುತ್ತಾರೆ’ ಎಂದು ದೂರಿದರು.




