January 31, 2026

ಪುತ್ತೂರು : ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಪರವಾಗಿ ಮಹಿಳಾ ಸಮಾವೇಶ ‘ಸೀತಾ ಪರಿವಾರ’ ಕಾರ್ಯಕ್ರಮ: ನೂರಾರು ಸಂಖ್ಯೆಯಲ್ಲಿ ಭಾಗಿ

0
IMG-20230428-WA0025.jpg

ಪುತ್ತೂರು : ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ರವರ ಪರವಾಗಿ ಮಹಿಳಾ ಸಮಾವೇಶ ‘ಸೀತಾ ಪರಿವಾರ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ನೂರಾರು ಸಂಖ್ಯೆಯಲ್ಲಿ ಮಹಿಳೆಯರು ಈ ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ.

ಹಿಂದುತ್ವದ ಅಡಿಯಲ್ಲಿ ಸುಮಾರು ವರ್ಷಗಳಿಂದ ಕೆಲಸ ಕಾರ್ಯಗಳನ್ನು ನಡೆಸಿಕೊಂಡು ಬರುತ್ತಿರುವ ಅರುಣ್ ಕುಮಾರ್ ಪುತ್ತಿಲ ರವರು ಕಾರ್ಯಕರ್ತರ ಅಪೇಕ್ಷೆಯಂತೆ ಈ ಬಾರಿ ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣಾ ಕಣಕ್ಕಿಳಿದಿದ್ದು, ಅವರ ಬೆಂಬಲವಾಗಿ ಅಪಾರ ಸಂಖ್ಯೆಯಲ್ಲಿ ಮಹಿಳೆಯರು ಮಹಿಳಾ ಸಮಾವೇಶಕ್ಕೆ ಆಗಮಿಸಿದ್ದಾರೆ.ಕಾರ್ಯಕ್ರಮದಲ್ಲಿ ದಿಕ್ಸೂಚಿ ಭಾಷಣವನ್ನು ಅಕ್ಷಯ ಗೋಖಲೆ ರವರು ಮಾಡುತ್ತಿದ್ದು, ಅಭ್ಯರ್ಥಿ ಅರುಣ್ ಪುತ್ತಿಲಸಹಿತ ಹಲವು ಪ್ರಮುಖರು ವೇದಿಕೆಯಲ್ಲಿ ಉಪಸ್ಥಿತರಿದ್ದಾರೆ.

ಅರುಣ್ ಪುತ್ತಿಲ ರವರು ಈ ಬಾರಿ ಚುನಾವಣೆಯಲ್ಲಿ ಜಯಶಾಲಿಯಾಗಬೇಕೇನ್ನುವ ಆಶಯವನ್ನಿಟ್ಟುಕೊಂಡು ನೂರಾರು ಸಂಖ್ಯೆಯಲ್ಲಿ ಮಹಿಳೆಯರು ಹಾಗೂ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದಾರೆ.

Leave a Reply

Your email address will not be published. Required fields are marked *

error: Content is protected !!