ಕಾಂಗ್ರೆಸ್ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರ 27 ಆಪ್ತರನ್ನು ಬಿಜೆಪಿಯಿಂದ ಉಚ್ಚಾಟನೆ
ಹುಬ್ಬಳ್ಳಿ: ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಮಾಜಿ ಸಿಎಂ, ಹುಬ್ಬಳ್ಳಿ-ಧಾರವಾಡ ಕೇಂದ್ರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರ 27 ಆಪ್ತರನ್ನು ಬಿಜೆಪಿಯಿಂದ ಉಚ್ಚಾಟನೆ ಮಾಡಲಾಗಿದೆ.
ಮಾಜಿ ಡಿಸಿಎಂ ಜಗದೀಶ್ ಶೆಟ್ಟರ್ ಬಿಜೆಪಿ ಟಿಕೆಟ್ ಕೈ ತಪ್ಪಿದ್ದರಿಂದ, ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡಿದ್ದರು. ಅವರು ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಕೈ ಅಭ್ಯರ್ಥಿಯಾಗಿದ್ದಾರೆ. ಇಂತಹ ಅವರಿಗೆ ಬಿಜೆಪಿಯಲ್ಲಿದ್ದು, ಕಾಂಗ್ರೆಸ್ ಗೆ ಸಪೋರ್ಟ್ ಮಾಡುತ್ತಿದ್ದಂತ ಅವರ 27 ಆಪ್ತರಿಗೆ ಬಿಗ್ ಶಾಕ್ ಎನ್ನುವಂತೆ ಪಕ್ಷದಿಂದ ಉಚ್ಚಾಟಿಸಲಾಗಿದೆ.
ಈ ಸಂಬಂಧ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಬಿಜೆಪಿ ಬ್ಲಾಕ್ ಅಧ್ಯಕ್ಷ ಸಂತೋಷ್ ಆದೇಶ ಹೊರಡಿಸಿದ್ದು, ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಮಹೇಶ್ ಘೋಷಣೆ ಮಾಡಲಾಗಿದೆ. ಇದಲ್ಲದೆ ಶೆಟ್ಟರ್ ಅವರ 27 ಆಪ್ತರನ್ನು ಉಚ್ಚಾಟಿಸಲಾಗಿದೆ.
ಬಿಜೆಪಿಯಿಂದ ಮಲ್ಲಿಕಾರ್ಜುನ ಸಾಹುಕಾರ್, ನಾಗೇಶ್ ಕಲಬುರ್ಗಿ, ರಾಧಾ, ಮಹೇಶ್ ಪತ್ತಾರ್, ವಿರೂಪಾಕ್ಷಿ ರಾಯನಗೌಡ ಸೇರಿದಂತೆ 27 ಮಂದಿಯನ್ನು ಬಿಜೆಪಿ ಪಕ್ಷದಿಂದ ಉಚ್ಚಾಟಿಸಲಾಗಿದೆ. ಇವರು ಬಿಜೆಪಿಯಲ್ಲಿದ್ದು, ಜಗದೀಶ್ ಶೆಟ್ಟರ್ ಪರವಾಗಿ ಕೆಲಸ ಮಾಡುತ್ತಿದ್ದರು ಎನ್ನಲಾಗುತ್ತಿತ್ತು.




