September 20, 2024

ಬೆಳ್ತಂಗಡಿ: ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ಉಮೆ ಉಜ್ಮಾ ಅನುಮಾನಸ್ವವಾಗಿ ಸಾವು

0

ಬೆಳ್ತಂಗಡಿ: ಮೇಡಿಕಲ್ ಕೋರ್ಸ್ ಪ್ರವೇಶಕ್ಕಾಗಿ ನೀಟ್ ಪರೀಕ್ಷೆ ಬರೆಯಲು ಹಾಸ್ಟೆಲ್ ಗೆ ಬಂದಿದ್ದ ವಿದ್ಯಾರ್ಥಿನಿಯೊಬ್ಬಳು ಅನುಮಾನಸ್ವದ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಏ.28 ರಂದು ಬೆಳಗ್ಗೆ ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ವಿದ್ಯಾಸಂಸ್ಥೆಯ ಹಾಸ್ಟೆಲ್ ನಲ್ಲಿ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ಮೇಡಿಕಲ್ ಕೋರ್ಸ್ ಪ್ರವೇಶಕ್ಕಾಗಿ ನೀಟ್ ಪರೀಕ್ಷೆ ಮೇ.7 ರಂದು ನಡೆಯಲಿದ್ದು. ನವಂಬರ್ ತಿಂಗಳಲ್ಲಿ ಪೂರ್ವ ತಯಾರಿ ಮಾಡಲು ಎಕ್ಸೆಲ್ ಕಾಲೇಜಿನ ಹಾಸ್ಟೆಲ್ ಗೆ ಬಂದಿದ್ದ ವಿದ್ಯಾರ್ಥಿನಿ ಉಮೆ ಉಜ್ಮಾ (19) ಏ. 28 ರಂದು ಬೆಳಗ್ಗೆ ಸುಮಾರು 5 ಗಂಟೆಗೆ ಹಾಸ್ಟೆಲ್ ನ ಕಟ್ಟಡದ ಮಹಡಿಯಿಂದ ಕೆಳಗೆ ಬಿದ್ದ ಸ್ಥಿತಿಯಲ್ಲಿ ಗಂಭೀರ ಗಾಯಗೊಂಡಿದ್ದು ತಕ್ಷಣ ಆಡಳಿತ ಮಂಡಳಿ ಉಜಿರೆ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿದಾಗ ಚಿಕಿತ್ಸೆ ಫಲಿಸದೆ ಬೆಳಗ್ಗೆ 9 ಗಂಟೆಗೆ ವಿದ್ಯಾರ್ಥಿನಿ ಸಾವನ್ನಪ್ಪಿದ ಎನ್ನಲಾಗಿದೆ.

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ವಿದ್ಯಾನಗರ ಎರಡನೇ ಅಡ್ಡ ರಸ್ತೆಯ ನಿವಾಸಿ ಸನಾವುಲ್ಲ ಮತ್ತು ಸೀಮಾ ಪಾರ್ವಿನ್ ದಂಪತಿಗಳ ಮಗಳಾದ ಉಮೆ ಉಜ್ಮಾ (19) ಸಾವನ್ನಪ್ಪಿದ ವಿದ್ಯಾರ್ಥಿನಿಯಾಗಿದ್ದಾಳೆ.

ವಿದ್ಯಾರ್ಥಿನಿ ಪರೀಕ್ಷೆಯ ವಿಚಾರದಲ್ಲಿ ಭಯದಿಂದ ಮನನೊಂದು ಆತ್ಮಹತ್ಯೆ ಅಥವಾ ಕಟ್ಟಡದಿಂದ ಜಾರಿ ಬಿದ್ದು ಸಾವನ್ನಪ್ಪಿರುವ ಶಂಕೆ ಇದ್ದು ಸೂಕ್ತ ತನಿಖೆ ನಡೆಸಲು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ವಿದ್ಯಾರ್ಥಿನಿ ತಂದೆ ಸನಾವುಲ್ಲ ದೂರು ನೀಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!