ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ‘ವಿಷಕನ್ಯೆ’ ಹೇಳಿಕೆ:
ಯತ್ನಾಳ್ ವಿರುದ್ಧ ದೂರು ದಾಖಲು
ಮೈಸೂರು: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ವಿಷಕನ್ಯೆ ಅಂತಾ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ಖಂಡಿಸಿ ಮೈಸೂರಿನಲ್ಲಿ ದೂರು ದಾಖಲಾಗಿದೆ.
ಯತ್ನಾಳ್ ಹೇಳಿಕೆ ಖಂಡಿಸಿ ಮೈಸೂರಿನಲ್ಲಿ ದೂರು ದಾಖಲಾಗಿದೆ. ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದಾರೆಂದು ಮೈಸೂರು ಸಿಟಿ ಪೊಲೀಸ್ ಆಯುಕ್ತರಿಗೆ ಎನ್‌ಎಸ್‌ಯುಐ ದೂರು ನೀಡಿದೆ. ಚುನಾವಣಾ ಅಧಿಕಾರಿಗಳಿಗೂ ದೂರು ನೀಡಿ ಕ್ರಮ ವಹಿಸುವಂತೆ ಮನವಿ ಮಾಡಲಾಗಿದೆ.
ಕೊಪ್ಪಳದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಯತ್ನಾಳ್, ಕಾಂಗ್ರೆಸ್ ನಲ್ಲಿ ರಾಹುಲ್ ಗಾಂಧಿ ಹುಚ್ಚ, ಸೋನಿಯಾ ಗಾಂಧಿ ವಿಷಕನ್ಯೆನಾ? ಬಸವರಾಜ ರಾಯರೆಡ್ಡಿ ಟಿಕ್ಕ ಎಂದು ಹೇಳುವ ಮೂಲಕ ಯತ್ನಾಳ್ ವಿವಾದದ ಕಿಡಿ ಹಚ್ಚಿದ್ದಾರೆ. ಬಸವರಾಜ ರಾಯರೆಡ್ಡಿ ಅವರು ನಮ್ಮ ಮೀಸಲಾತಿಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಅವರ ವಿರುದ್ಧ ಮಾತನಾಡುತ್ತೇನೆ ಎಂದರು.




