March 19, 2026

ಬೆಂಗಳೂರು: ಕಾಲೇಜಿನಲ್ಲಿ ಎರಡು ಗುಂಪುಗಳ ನಡುವೆ ಗಲಾಟೆ:
ಚಾಕುವಿನಿಂದ ಇರಿದು ಓರ್ವ ವಿದ್ಯಾರ್ಥಿಯ ಹತ್ಯೆ

0
99859360.jpg

ಬೆಂಗಳೂರು: ಕಾಲೇಜಿನಲ್ಲಿ ಎರಡು ಗುಂಪುಗಳ ನಡುವೆ ನಡೆದ ಗಲಾಟೆಯಲ್ಲಿ ಓರ್ವ ವಿದ್ಯಾರ್ಥಿಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಗುಜರಾತ್ ಮೂಲದ ಭಾಸ್ಕರ್ ಜೆಟ್ಟಿ (22) ಮೃತ ವಿದ್ಯಾರ್ಥಿ ರೇವಾ ಕಾಲೇಜಿನಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಓದುತ್ತಿದ್ದು, ಕಾಲೇಜು ಪೆಸ್ಟ್ ವೇಳೆ ಎರಡು ಗುಂಪುಗಳ ನಡುವೆ ಗಲಾಟೆಯಾಗಿದೆ.

ಬೆಂಗಳೂರಿನ ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯಾ ರೇವಾ ಕಾಲೇಜಿನಲ್ಲಿ ಕಾಲೇಜು ಫೆಸ್ಟ್ ವೇಳೆ ಗಲಾಟೆ ನಡೆದಿದ್ದು, ಈ ವೇಳೆ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿದ್ಯಾರ್ಥಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಸುಮಾರು ನಿನ್ನೆ ರಾತ್ರಿ 9.30 ಕ್ಕೆ ಈ ವೇಳೆ ಭಾಸ್ಕರ್ ಎನ್ನುವ ವಿದ್ಯಾರ್ಥಿಗೆ ಇನ್ನೊಂದು ಗುಂಪು ಚಾಕುವಿನಿಂದ ಇರಿದಿದ್ದು, ವಿದ್ಯಾರ್ಥಿ ಭಾಸ್ಕರ್ ಜೆಟ್ಟಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಘಟನೆ ಸಂಬಂಧ ಬಾಗಲೂರು ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!