February 1, 2026

ಮಂಗಳೂರಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ರೋಡ್ ಶೋ

0
IMG-20230429-WA0037.jpg

ಮಂಗಳೂರು: ವಿಧಾನ ಸಭಾ ಚುನಾವಣೆಗೆ ಸಂಬಂಧಿಸಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಂಗಳೂರು ನಗರದಲ್ಲಿ ಶನಿವಾರ ರೋಡ್ ಶೋ ನಡೆಸಿದ್ದಾರೆ.

ನಗರದ ಪುರಭವನ ಸಮೀಪದ ಕ್ಲಾಕ್ ಟವರ್‌ನಿಂದ ಕೊಡಿಯಾಲ್‌ ಬೈಲ್‌ನ ಮಂಜೇಶ್ವರ ಗೋವಿಂದ ಪೈ ಸರ್ಕಲ್ ವರೆಗೆ ರೋಡ್ ಶೋ ನಡೆಯಿತು.

ಇನ್ನು ರೋಡ್ ಶೋನಲ್ಲಿ ಅಪಾರ ಸಂಖ್ಯೆಯಲ್ಲಿ ಕಾರ್ಯಕರ್ತರು, ಬೆಂಬಲಿಗರು ಭಾಗವಹಿಸಿದ್ದರು.

ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳೀನ್ ಕುಮಾರ್ ಕಟೀಲ್, ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಮೂಡಬಿದ್ರೆ ಅವರು ಅಮಿತ್ ಶಾಗೆ ಸಾಥ್ ನೀಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!