ರಾಮ ನವಮಿ ಹಿಂಸಾಚಾರ ಪ್ರಕರಣ: ಮಾಜಿ ಬಿಜೆಪಿ ಶಾಸಕನ ಬಂಧನ

ಬಿಹಾರ: ಸಸಾರಂ ಜಿಲ್ಲೆಯಲ್ಲಿ ಕಳೆದ ತಿಂಗಳು ರಾಮನವಮಿ ಮೆರವಣಿಗೆಯ ಸಂದರ್ಭದಲ್ಲಿ ಭುಗಿಲೆದಿದ್ದ ಕೋಮು ಹಿಂಸಾಚಾರದ ತನಿಖೆಗೆ ಸಂಬಂಧಿಸಿದಂತೆ ಬಿಜೆಪಿ ಮಾಜಿ ಶಾಸಕ ಜವಾಹರ್ ಪ್ರಸಾದ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಅಲ್ಪಸಂಖ್ಯಾತರನ್ನು ಸಮಾಧಾನಪಡಿಸಲು ಮಾಜಿ ಶಾಸಕರನ್ನು ಬಂಧಿಸಲಾಗಿದೆ ಎಂದು ಬಿಜೆಪಿ ಆರೋಪಿಸಿದೆ. ಸಸಾರಂ ವಿಧಾನಸಭಾ ಕ್ಷೇತ್ರದಿಂದ ಐದು ಅವಧಿಗೆ ಶಾಸಕರಾಗಿ, ಈಗ ಮಾಜಿಯಾಗಿರುವ ಪ್ರಸಾದ್ ಅವರನ್ನು ಶುಕ್ರವಾರ ರಾತ್ರಿ ಅವರ ಮನೆಯಿಂದ ಬಂಧಿಸಲಾಗಿದೆ.
ರೋಹ್ತಾಸ್ ನ್ಯಾಯಾಲಯವು ಅವರ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಿತ್ತು. ಮಾರ್ಚ್ 31 ಮತ್ತು ಏಪ್ರಿಲ್ 1 ರಂದು ನಡೆದ ರಾಮನವಮಿ ಮೆರವಣಿಗೆ ವೇಳೆಯಲ್ಲಿ ಕ್ರಮವಾಗಿ ರೋಹ್ತಾಸ್ ಮತ್ತು ನಳಂದಾ ಜಿಲ್ಲೆಗಳ ಜಿಲ್ಲಾ ಕೇಂದ್ರವಾದ ಸಸಾರಾಮ್ ಮತ್ತು ಬಿಹಾರ ಷರೀಫ್ ಹಿಂಸಾಚಾರಕ್ಕೆ ಸಾಕ್ಷಿಯಾಗಿತ್ತು. ಘರ್ಷಣೆಯಲ್ಲಿ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದ.