February 3, 2026

ಬೈಂದೂರು: ರೈಲು ಢಿಕ್ಕಿ ಹೊಡೆದು ಯುವಕ ಮೃತ್ಯು

0
IMG-20230430-WA0001.jpg

ಬೈಂದೂರು: ಕಿರಿಮಂಜೇಶ್ವರ ಗ್ರಾಮದ ನಾಗೂರಿನ ಸಂದೀಪನ್ ಶಾಲೆಯ ಹಿಂಭಾಗದಲ್ಲಿ ಚಲಿಸುತ್ತಿದ್ದ ರೈಲು ಢಿಕ್ಕಿ ಹೊಡೆದ ಪರಿಣಾಮ ಯುವಕನೊಬ್ಬ ಮೃತಪಟ್ಟ ಘಟನೆ ನಡೆದಿದೆ.

ಮೃತರನ್ನು ಪಾರ್ವತಿ ಎಂಬವರ ಮಗ ಕರುಣಾಕರ ಪೂಜಾರಿ (33) ಎಂದು ಗುರುತಿಸಲಾಗಿದೆ.

ಅವಿವಾಹಿತರಾಗಿರುವ ಕರುಣಾಕರ ಪೂಜಾರಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. ಎ.26ರಂದು ಸಂಜೆ ಮನೆಯಲ್ಲಿ ಧರ್ಮಸ್ಥಳಕ್ಕೆ ಹೋಗುವುದಾಗಿ ತಿಳಿಸಿ ಹೋದವರು, ರೈಲ್ವೆ ಹಳಿಯಲ್ಲಿ ನಡೆದುಕೊಂಡು ಹೋಗುವಾಗ ರೈಲು ಡಿಕ್ಕಿ ಹೊಡೆಯಿತ್ತೆನ್ನಲಾಗಿದೆ.

ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!