ಕಾಂಗ್ರೆಸ್ ಮತ್ತು ಜೆಡಿಎಸ್ ನ 50 ಅಭ್ಯರ್ಥಿಗಳ ಮೇಲೆ ಐಟಿ ರೇಡ್ ಆಗಲಿದೆ: ಲಕ್ಷ್ಮಿ ಹೆಬ್ಬಾಳ್ಕರ್ ಆರೋಪ
ಬೆಳಗಾವಿ: ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು, ಮುಖಂಡರ ಮೇಲೆ ಐಟಿ, ಇಡಿ ದಾಳಿಯಾಗುವ ಸಾಧ್ಯತೆ ಇದೆ ಎಂದು ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮೀ ಹೆಬ್ಬಾಳ್ಕರ್ ಹೊಸ ಬಾಂಬ್ ಸಿಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಕ್ಷೇತ್ರದಲ್ಲಿ ಮೂವರು ಮುಖಂಡರನ್ನು ಟಾರ್ಗೆಟ್ ಮಾಡಲಾಗಿದೆ. ಐಟಿ, ಇಡಿ ದಾಳಿ ನಡೆಯುವ ಸಾಧ್ಯತೆ ಇದೆ. ನಮ್ಮ ಪಕ್ಷದ ಮುಖಂಡರ ಶಕ್ತಿ ತಡೆಯಲು ಪ್ರಯತ್ನ ನಡೆಯುತ್ತಿದೆ ಎಂದು ಹೇಳಿದ್ದಾರೆ.
ಸುಮಾರು 50 ಅಭ್ಯರ್ಥಿಗಳ ಮನೆ ಮೇಲೆ ರೇಡ್ ಮಾಡುವ ಸಾಧ್ಯತೆ ಇದೆ. 50 ಅಭ್ಯರ್ಥಿಗಳಲ್ಲಿ ಕಾಂಗ್ರೆಸ್, ಜೆಡಿಎಸ್ ಎರಡೂ ಪಕ್ಷದವರು ಇದ್ದಾರೆ. 15 ದಿನದ ಹಿಂದೆಯೇ ಐಟಿ ಅಧಿಕಾರಿಗಳು ರಾಜ್ಯಕ್ಕೆ ಬಂದಿರುವ ಮಾಹಿತಿ ಇದೆ. ಸುಮಾರು 1000 ಐಟಿ ಅಧಿಕಾರಿಗಳು ರಾಜ್ಯಕ್ಕೆ ಈಗಾಗಲೇ ಬಂದಿದ್ದಾರೆ. ಎರಡು-ಮೂರು ದಿನಗಳಲ್ಲಿ ಮನೆಗಳ ಮೇಲೆ ದಾಳಿ ನಡೆಯುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.




