March 24, 2026

ಬೆಳ್ತಂಗಡಿ: ಕೆಲಸ ಮಾಡುತ್ತಿದ್ದಾಗ ಮಹಡಿಯಿಂದ ಬಿದ್ದು ಯುವಕ ಮೃತ್ಯು

0
IMG-20230430-WA0003.jpg

ಬೆಳ್ತಂಗಡಿ: ಕೆಲಸ ಮಾಡುತ್ತಿದ್ದ ಮನೆಯ ಮಹಡಿಯಿಂದ ಬಿದ್ದು ಯುವಕನೋರ್ವ ಸಾವನ್ನಪ್ಪಿರುವ ದಾರುಣ ಘಟನೆ ತಾಲೂಕಿನ ಮಿತ್ತಬಾಗಿಲು ಗ್ರಾಮದ ಕುಕ್ಕಾವು ಎಂಬಲ್ಲಿ ನಡೆದಿದೆ.

ಮೃತರನ್ನು ಕುಕ್ಕಾವು ನಿವಾಸಿ ಲಕ್ಷ್ಮಣ ಕುಂಬಾರ ಎಂಬವರ ಪುತ್ರ ಹರೀಶ್ (30) ಎಂದು ಗುರುತಿಸಲಾಗಿದೆ.

ಹರೀಶ್ ಅವರು ಏಪ್ರಿಲ್ 21 ರಂದು ನಾರಾಯಣ ಕುಂಬಾರ ಅವರ ಮನೆಯ ಮಹಡಿ ಮೇಲೆ ಕೆಲಸ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಗಂಭೀರ ಗಾಯಗೊಂಡಿದ್ದರು.

ತಕ್ಷಣ ಅವರನ್ನು ಉಜಿರೆ ಆಸ್ಪತ್ರೆಗೆ ಸಾಗಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಹರೀಶ್ ಅವರು ತಂದೆ-ತಾಯಿ, ಪತ್ನಿ, ಒಂದೂವರೆ ವರ್ಷದ ಮಗುವನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!