ಪುತ್ತೂರು: ಬಿಜೆಪಿ ಪಕ್ಷದ ಚಿಹ್ನೆ ಉಪಯೋಗಿಸಿ ಚುನಾವಣಾ ಪ್ರಚಾರ ದೂರು:
ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಚುನಾವಣಾ ಕಚೇರಿಯಲ್ಲಿ ಅಧಿಕಾರಿಗಳಿಂದ ಪರಿಶೀಲನೆ
ಪುತ್ತೂರು: ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯೋರ್ವರು ಬಿಜೆಪಿ ಪಕ್ಷದ ಚಿಹ್ನೆಯನ್ನು ಉಪಯೋಗಿಸಿ ಚುನಾವಣಾ ಪ್ರಚಾರ ಮಾಡುತ್ತಿರುವುದಾಗಿ ಚುನಾವಣಾಧಿಕಾರಿಗೆ ಬಂದಿರುವ ದೂರಿಗೆ ಸಂಬಂಧಿಸಿ ಚುನಾವಣಾ ಮಾದರಿ ನೀತಿ ಸಂಹಿತೆ ತಂಡ ಅರುಣ್ ಕುಮಾರ್ ಪುತ್ತಿಲ ಅವರ ಚುನಾವಣಾ ನಿರ್ವಹಣಾ ಕಚೇರಿಗೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
ಈ ಕುರಿತು ಅರುಣ ಕುಮಾರ್ ಪುತ್ತಿಲ ಅವರು ಚುನಾವಣಾಧಿಕಾರಿಯವರಿಗೆ ಯಾವುದೆ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿಲ್ಲ ಎಂದು ಲಿಖಿತ ರೂಪದಲ್ಲಿ ಸ್ಪಷ್ಟನೆ ನೀಡಿದ್ದಾರೆ.
ಅಕ್ರಮ ನಡೆದಿಲ್ಲ:
ಬಿಜೆಪಿ ಪಕ್ಷದ ಚಿಹ್ನೆಯನ್ನು ಉಪಯೋಗಿಸಿ ಚುನಾವಣಾ
ಪ್ರಚಾರ ಮಾಡುತ್ತಿರುವುದಾಗಿ ಚುನಾವಣಾಧಿಕಾರಿಗೆ ಬಂದಿರುವ
ದೂರಿಗೆ ಸಂಬಂಧಿಸಿ ಚುನಾವಣಾ ಮಾದರಿ ನೀತಿ ಸಂಹಿತೆ ತಂಡ ಅರುಣ್ ಕುಮಾರ್ ಪುತ್ತಿಲ ಅವರ ಚುನಾವಣಾ ನಿರ್ವಹಣಾ ಕಚೇರಿಗೆ ತೆರಳಿ ಪರಿಶೀಲನೆ ನಡೆಸಿದಾಗ ಬಿಜೆಪಿ ಚಿಹ್ನೆ ಅಥವಾ ಪ್ರಧಾನಿ ನರೇಂದ್ರ ಮೋದಿಯವರ ಭಾವಚಿತ್ರ ಯಾವುದೇ ಪತ್ರಕಗಳು ಪತ್ತೆಯಾಗಿಲ್ಲ.
ಅರುಣ್ ಕುಮಾರ್ ಪುತ್ತಿಲ ಅವರ ಪ್ರಚಾರ ತಂಡವನ್ನು ವಿಚಾರಿಸಿದಾಗಲೂ ಯಾವುದೇ ಅಕ್ರಮ ನಡೆದಿಲ್ಲ ಎಂಬ ಕುರಿತು ಮಾದರಿ ನೀತಿ ಸಂಹಿತೆ ನೋಡೆಲ್ ಅಧಿಕಾರಿ ಚುನಾವಣಾಧಿಕಾರಿಯವರಿಗೆ ವರದಿ ನೀಡಿರುವುದಾಗಿ ತಿಳಿದು
ಬಂದಿದೆ.