ಉಪ್ಪಿನಂಗಡಿ: ಮೀನು ಹಿಡಿಯಲು ತೆರಳಿದ್ದ ಪಿಯುಸಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಮೃತ್ಯು
ಉಪ್ಪಿನಂಗಡಿ: ಕೆಂಪಿಮಜಲು ನೇತ್ರಾವತಿ ನದಿಯ ಸನ್ಯಾಸಿ ಕಯ ಎಂಬಲ್ಲಿ ಸಂಬಂಧಿಕನ ಜೊತೆ ಮೀನು ಹಿಡಿಯಲು ತೆರಳಿದ್ದ ಪಿಯುಸಿ ವಿದ್ಯಾರ್ಥಿಯೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ವರದಿಯಾಗಿದೆ.
ಮೃತಪಟ್ಟ ವಿದ್ಯಾರ್ಥಿಯನ್ನು ಬಜತ್ತೂರು ನಿವಾಸಿ ಓಡಿಯಪ್ಪ ಮತ್ತು ಗೋಪಿ ಎಂಬವರ ಪುತ್ರ ರೂಪೇಶ್ (17) ಎಂದು ಗುರುತಿಸಲಾಗಿದೆ.
ರೂಪೇಶ್ ಉಪ್ಪಿನಂಗಡಿಯ ಸರಕಾರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಯಾಗಿದ್ದಾನೆ.