November 21, 2024

IMO, Enigma ಸಹಿತ 14 ಮೆಸೆಂಜರ್ ಆ್ಯಪ್‌ ಗಳನ್ನು ನಿರ್ಬಂಧಿಸಿದ ಕೇಂದ್ರ ಸರಕಾರ

0

ನವದೆಹಲಿ: ಭಯೋತ್ಪಾದಕ ಗುಂಪುಗಳು ಬಳಸುತ್ತಿದ್ದ 14 ಮೆಸೆಂಜರ್ ಆ್ಯಪ್‌ ಗಳನ್ನು ಕೇಂದ್ರ ಸರ್ಕಾರ ನಿರ್ಬಂಧಿಸಿದೆ.

ಎನಿಗ್ಮಾ, ಸೇಫ್‌ವಿಸ್, ವಿಕ್ರ್ಮೆ, ಮೀಡಿಯಾಫೈರ್, ಕ್ರಿಪ್‌ವೈಸರ್, ಬ್ರಿಯಾರ್, ಬಿಚಾಟ್, ನಂಡ್‌ಬಾಕ್ಸ್, ಕೊನಿಯನ್, ಐಎಂಒ, ಜಂಗಿ, ಥ್ರೀಮಾ ಎಲಿಮೆಂಟ್ ಮತ್ತು ಸೆಕೆಂಡ್ ಲೈನ್ ಆ್ಯಪ್‌ ಗಳನ್ನು ನಿಷೇಧಿಸಿದೆ.

ಭದ್ರತಾ ಮತ್ತು ಗುಪ್ತಚರ ಸಂಸ್ಥೆಗಳ ಶಿಫಾರಸಿನ ಮೇರೆಗೆ ಕೇಂದ್ರ ಸರ್ಕಾರ ಈ ಕ್ರಮವನ್ನು ಕೈಗೊಂಡಿದೆ. ಈ ಆ್ಯಪ್‌ಗಳನ್ನು ಮಾಹಿತಿ ತಂತ್ರಜ್ಞಾನ ಕಾಯ್ದೆ 2000ರ ಸೆಕ್ಷನ್ 69ಎ ಅಡಿಯಲ್ಲಿ ನಿರ್ಬಂಧಿಸಲಾಗಿದೆ.

ಆ್ಯಪ್‌ ಗಳು ಕಣಿವೆಯಲ್ಲಿ ಭಯೋತ್ಪಾದಕ ಕುರಿತಾದ ಪ್ರಚಾರವನ್ನು ಮಾಡುತ್ತಿತ್ತು. ಈ ಆ್ಯಪ್‌ಗಳ ಮೂಲಕ ಉಗ್ರರು ರಹಸ್ಯ ಸಂದೇಶಗಳನ್ನು ಕಣಿವೆಯಲ್ಲಿರುವ ತನ್ನ ಕಾರ್ಯಕರ್ತರಿಗೆ ಕಳುಹಿಸುತ್ತಿದ್ದರು ಎಂದು ವರದಿ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!