ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಇಂದು ಮಂಗಳೂರಿಗೆ
ಮಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇದ್ದು, ರಾಜಕೀಯ ಪಕ್ಷಗಳು ಭರ್ಜರಿ ಪ್ರಚಾರ ಮಾಡುತ್ತಿದೆ.
ಕರಾವಳಿ ಭಾಗದಲ್ಲಿ ಜಿದ್ದಿಗೆ ಬಿದ್ದವರಂತೆ ಕಾಂಗ್ರೆಸ್ ಹಾಗೂ ಬಿಜೆಪಿ ಭರ್ಜರಿ ಪ್ರಚಾರದಲ್ಲಿ ತೊಡಗಿ, ಇದೀಗ ಜೆಡಿಎಸ್ ಕೂಡಾ ಕ್ಯಾಂಪೇನ್ ಗೆ ಭರ್ಜರಿ ತಯಾರಿ ಮಾಡಿಕೊಂಡಿದ್ದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಮೇ 1ರ ಇಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಿ ವಿವಿಧ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಇಂದು ಮಧ್ಯಾಹ್ನ ಕೃಷ್ಣಾಪುರದ ಫಿಝ ಗಾರ್ಡನ್ ಹೆಲಿಪಾಡ್ ಗೆ ಅಗಮಿಸಲಿದ್ದು, ಸುರತ್ಕಲ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಬಳಿಕ ಸುಂಕದಕಟ್ಟೆ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ.
ಬಳಿಕ ಬಲವಂಡಿ ದೈವಸ್ಥಾನ, ಗುರುಪುರ ಕಂಬಳ ದರ್ಗಾ ಭೇಟಿ ನೀಡಲಿದ್ದಾರೆ. ಸಂಜೆ 5 ಗಂಟೆಗೆ ಗುರುಪುರ ಕೈಕಂಬದ ವಸ್ತು ಪ್ರದರ್ಶನ ಮೈದಾನದಲ್ಲಿ ನಡೆಯುವ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಮೇ 1 ಕಾರ್ಮಿಕ ದಿನದ ಹಿನ್ನೆಲೆಯಲ್ಲಿ ಕಾರ್ಮಿಕರಿಗೆ ಸಮ್ಮಾನ ಮಾಡಲಿದ್ದಾರೆ.
ರಾತ್ರಿ ೯.೫೦ಕ್ಕೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ತೆರಳಲಿದ್ದಾರೆ.





