ವಿರಾಟ್ ಕೊಹ್ಲಿ – ಗೌತಮ್ ಗಂಭೀರ್ ನಡುವೆ ಜಗಳ: ಮೈದಾನದಲ್ಲೇ ತಳ್ಳಾಟ
ಲಖನೌ: ಲಖನೌದ ಏಕನಾ ಕ್ರೀಡಾಂಗಣದಲ್ಲಿ ಸೋಮವಾರ (ಮೇ 1) ನಡೆದ ಐಪಿಎಲ್ 2023 ಟೂರ್ನಿಯ 43ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಆತಿಥೇಯ ಲಖನೌ ಸೂಪರ್ ಜಯಂಟ್ಸ್ ಎದುರು 18 ರನ್‌ಗಳ ಜಯ ದಕ್ಕಿಸಿಕೊಂಡು, ಈ ಹಿಂದಿನ 1 ವಿಕೆಟ್ ಸೋಲಿಗೆ ಸೇಡು ತೀರಿಸಿಕೊಂಡಿತು. ಇದರ ಬೆನ್ನಲ್ಲೇ ಆನ್‌ಫೀಲ್ಡ್‌ನಲ್ಲಿ ವಿರಾಟ್ ಕೊಹ್ಲಿ ಮತ್ತು ಎಲ್‌ಎಸ್‌ಜಿ ಮೆಂಟರ್ ಗೌತಮ್ ಗಂಭೀರ್ ನಡುವೆ ದೊಡ್ಡ ಜಗಳವೇ ನಡೆಯಿತು.
ವಿರಾಟ್ ಕೊಹ್ಲಿ ಹಾಗೂ ಗೌತಮ್ ಗಂಭೀರ್ ನಡುವೆ ಈ ಹಿಂದೆಯೂ ಹಲವು ಬಾರಿ ಜಗಳ ನಡೆದಿವೆ. ಆ ನಂತರ ಇಬ್ಬರ ನಡುವೆ ಉತ್ತಮ ಬಾಂಧವ್ಯವಿತ್ತು ಎನ್ನಲಾಗಿತ್ತು. ಆದರೆ ಸೋಮವಾರ ನಡೆದ ಪಂದ್ಯದ ಬಳಿಕ ಇವರಿಬ್ಬರ ನಡುವೆ ಯಾವ ಮಟ್ಟದ ಉತ್ತಮ ಹೊಂದಾಣಿಕೆ ಇದೆ ಎಂಬುದು ಇಡೀ ಜಗತ್ತಿಗೆ ತಿಳಿದಿದೆ.





