November 22, 2024

ಬಂಟ್ವಾಳದಲ್ಲಿ ಕೋಮುಗಲಭೆಯ ರೂವಾರಿ ರಮಾನಾಥ ರೈ: ಹರಿಕೃಷ್ಣ ಬಂಟ್ವಾಳ

0

ಬಂಟ್ವಾಳ: ರಮಾನಾಥ ರೈ ಅವರ ರಾಜಕೀಯ ಚಿಂತನೆಯ ಪರಿಣಾಮದಿಂದ ಹಿಂದೆ ಬಂಟ್ವಾಳದಲ್ಲಿ ಕೋಮುಗಲಭೆ, ಗೋಹತ್ಯೆ, ಹಿಂದೂ ಯುವಕರ ವಿರುದ್ಧ ಕೇಸ್ ಮೊದಲಾದ ಘಟನೆಗಳು ನಡೆದಿದ್ದು, ೨೦೧೭ರಲ್ಲಿ ಹಿರಿಯ ನಾಯಕ ಜನಾರ್ದನ ಪೂಜಾರಿ ಅವರನ್ನು ಕಣ್ಣೀರು ಹಾಕಿಸಿ ನಿಂದನೆ ಮಾಡಿದ ಕೀರ್ತಿಯೂ ರೈ ಅವರಿಗೆ ಸಲ್ಲುತ್ತದೆ ಎಂದು ಜಿಲ್ಲಾ ಬಿಜೆಪಿ ಉಪಾಧ್ಯಕ್ಷ, ರಾಜ್ಯ ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ ಹೇಳಿದರು.

ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರೈ ಅವರು ೨೦೧೮ರ ಚುನಾವಣೆಗೆ ಮೊದಲು ಬಂಟ್ವಾಳದಲ್ಲಿ ೧ ಸಾವಿರ ಕೋ.ರೂ.ಗಳ ಅಭಿವೃದ್ಧಿ ಮಾಡಿರುವುದಾಗಿ ಬಿ.ಸಿ.ರೋಡು ಸರ್ಕಲ್‌ನಲ್ಲಿ ಬ್ಯಾನರ್ ಹಾಕಿರುವ ಜತೆಗೆ ಪತ್ರಿಕೆಗಳಲ್ಲಿ ಹೇಳಿಕೆ ನೀಡಿದ್ದರು.

ಈಗ ೫ ಸಾವಿರ ಕೋ.ರೂ. ತಂದಿದ್ದೇನೆ ಎಂದು ಸುಳ್ಳು ಪ್ರಚಾರ ಮಾಡುತ್ತಿದ್ದಾರೆ. ಉಳಿದ ೪ ಸಾವಿರ ಕೋಟಿ ಎಲ್ಲಿಗೆ ಹೋಯಿತು ಎಂಬುದನ್ನು ನೀವು ಹೇಳಬೇಕು ಎಂದರು.

ಸುದ್ದಿಗೋಷ್ಠಿಯಲ್ಲಿ ಮಾಜಿ ಶಾಸಕ ರುಕ್ಮಯ ಪೂಜಾರಿ, ಮಂಡಲ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!