February 3, 2026

ಪುತ್ತೂರು: ಚುನಾವಣಾ ಪ್ರಚಾರ ಸಭೆಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಯಿಂದ ಎಸ್ಡಿಪಿಐ ಬಗ್ಗೆ ಅಪಪ್ರಚಾರ: ರಿಯಾಝ್ ಕಡಂಬು ವಾಗ್ದಾಳಿ

0
image_editor_output_image-998233897-1683017072359.jpg

ಪುತ್ತೂರು: ಚುನಾವಣಾ ಪ್ರಚಾರ ಸಭೆಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಎಸ್ ಡಿಪಿಐ ಅನ್ನು ಟಾರ್ಗೆಟ್ ಮಾಡಿ ಮಾತನಾಡುತ್ತಿದ್ದಾರೆ. ಇದಕ್ಕೆ ಹೇಗೆ ಉತ್ತರಿಸಬೇಕೆಂದು ಎಸ್ ಡಿ ಪಿ ಐಗೆ ತಿಳಿದಿದೆ ಎಂದು ಪಕ್ಷದ ರಾಜ್ಯ ವಕ್ತಾರ ರಿಯಾಜ್ ಕಡಂಬು ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

ಈ ಕುರಿತು ಪುತ್ತೂರಿನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಶಾಫಿ ಬೆಳ್ಳಾರೆ ಚುನಾವಣಾ ರಣರಂಗದಲ್ಲಿ ಫ್ಯಾಸಿಸ್ಟ್ ಸರಕಾರದ ಧೋರಣೆಯಿಂದಾಗಿ ಜೈಲಿನಲ್ಲಿದ್ದುಕೊಂಡು ಸ್ಪರ್ಧೆ ಮಾಡಲಿದ್ದಾರೆ. ಆದರೆ ಬಿಜೆಪಿ ಜನರ ನೈಜ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡು ಸ್ಪಂಧಿಸದೆ ದಿನ ಬೆಳಗಾದರೆ ಕೋಮುವಾದ ಮಾಡಿ ಧರ್ಮಗಳ ನಡುವೆ ಕಂದಕ ಉಂಟು ಮಾಡುತ್ತಿದೆ. ಇದರ ಜೊತೆಗೆ ಬಿಜೆಪಿಯಲ್ಲಿ ಭಿನ್ನಮತ ಸ್ಪೋಟಗೊಂಡಿದೆ. ನಮ್ಮಿಂದ ಮಾತ್ರ ಜಾತ್ಯಾತೀತತೆ ಉಳಿಸಲು ಸಾಧ್ಯ ಎಂದು ಹೇಳಿ ರಾಹುಲ್ ಗಾಂಧಿ ಭಾಷಣ ಮಾಡುತ್ತಾರೆ. ಆದರೆ ಪುತ್ತೂರಿನಲ್ಲಿ ಆರ್ ಎಸ್ ಎಸ್ ನ ಹಿನ್ನಲೆಯುಳ್ಳ ವ್ಯಕ್ತಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ. ಕಾಂಗ್ರೆಸ್ ಮತ್ತು ಬಿಜೆಪಿಯಲ್ಲಿ ಸಂಘ ಪರಿವಾರದ ವ್ಯಕ್ತಿ ಸ್ಪರ್ಧೆಯಲ್ಲಿದ್ದಾರೆ ಎಂದು ಹೇಳಿದ ಅವರು ಸತ್ಯ ಮತ್ತು ನ್ಯಾಯದ ವರವಾಗಿರುವ ಎಸ್ ಡಿ ಪಿ ಐಗೆ ಮತ ನೀಡುವಂತೆ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಬಜತ್ತೂರು, ಕ್ಷೇತ್ರ ಸಮಿತಿ ಸದಸ್ಯ ಇಬ್ರಾಹಿಂ ಹಾಜಿ ಸಾಗರ್, ಜಿಲ್ಲಾ ಸಮಿತಿ ಸದಸ್ಯ ಅಬೂಬಕ್ಕರ್ ಮರ್ದ, ತಾಲೂಕು ಉಪಾಧ್ಯಕ್ಷ ಅಬ್ದುಲ್ ಹಮೀದ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You may have missed

error: Content is protected !!