December 18, 2025

ಮಂಗಳೂರು: ಮೋರಿಯಲ್ಲಿ ಬಾಲಕಿಯ ಮೃತದೇಹ ಪತ್ತೆ ಪ್ರಕರಣ:
ಉತ್ತರ ಭಾರತದ 20 ಮಂದಿಯ ವಶಕ್ಕೆ

0
Screenshot_2021-11-23-13-26-00-49_680d03679600f7af0b4c700c6b270fe7.jpg

ಮಂಗಳೂರು: ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯ ವ್ಯಾಪ್ತಿಯ ಪರಾರಿ ಸಮೀಪದ ರಾಜ್‌ ಟೈಲ್ಸ್‌‌‌‌ ಹೆಂಚಿನ ಕಾರ್ಖಾನೆಯಲ್ಲಿ ಸಮೀಪದ ಮೋರಿಯಲ್ಲಿ 8 ರ ಹರೆಯದ ಬಾಲಕಿಯ ಮೃತದೇಹ ಪತ್ತೆಯಾಗಿರುವ ಪ್ರಕರಣದ ತನಿಖೆಯನ್ನು ಪೊಲೀಸರು ತೀವ್ರಗೊಳಿಸಿದ್ದು ಉತ್ತರ ಭಾರತದ 20 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.

ಭಾನುವಾರ ಕಾರ್ಖಾನೆಗೆ ರಜೆ ಇದ್ದುದರಿಂದ ಕಾರ್ಮಿಕರು ಅಲ್ಲೇ ವಾಸವಾಗಿದ್ದರು. ಆ ವೇಳೆ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ವೆಸಗಿರುವ ಕೊಲೆಗೈದಿರುವವ ಸಾಧ್ಯತೆ ಇದೆ ಎನ್ನಲಾಗಿದೆ.

ಕಾರ್ಖಾನೆಯನ್ನು ಕೇರಳ ಮೂಲದ ವ್ಯಕ್ತಿಗಳು ನಡೆಸುತ್ತಿದ್ದು ಇಲ್ಲಿ ಸುಮಾರು 25 ಮಂದಿ ದುಡಿಯುತ್ತಿದ್ದಾರೆ. ಬಾಲಕಿ ನಾಪತ್ತೆಯಾಗಿರುವುದು ಸಂಜೆ 4 ಗಂಟೆ ವೇಳೆಗೆ ಮನೆಮಂದಿಗೆ ತಿಳಿದುಬಂದಿತ್ತು.6 ಗಂಟೆ ವೇಳೆಗೆ ಮೃತದೇಹ ಪತ್ತೆಯಾಗಿದೆ. ಪೊಲೀಸರು ಸ್ಥಳೀಯವಾಗಿ ಸಿಸಿಟಿವಿ ಫುಟೇಜ್ ಪರಿಶೀಲನೆ ನಡೆಸುತ್ತಿದ್ದಾರೆ. ಮಾತ್ರವಲ್ಲದೆ ಮರಣೋತ್ತರ ವರದಿಗಾಗಿ ಪೊಲೀಸರು ಕಾಯುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!