February 4, 2026

ಫೇಸ್ ಬುಕ್ ಲೈವ್ ಮಾಡಿ ಆತ್ಮಹತ್ಯೆಗೆ ಶರಣಾದ ದೇವಸ್ಥಾನದ ಅರ್ಚಕ

0
dead-4-1.jpg

ಅಯೋಧ್ಯೆ: ಅಯೋಧ್ಯೆಯ ಕೊಟ್ವಾಲಿ ಪ್ರದೇಶದ ರಾಯಗಂಜ್ ಚೌಕಿ ಬಳಿ ದೇವಸ್ಥಾನದ ಅರ್ಚಕರೊಬ್ಬರು ಫೇಸ್ ಬುಕ್ ಲೈವ್ ಮಾಡಿ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಅರ್ಚಕನನ್ನು ರಾಮ್ ಶಂಕರ್ ದಾಸ್ (28) ಎನ್ನಲಾಗಿದೆ.

ಕೆಲ ದಿನಗಳ ಹಿಂದೆ ರಾಮ್ ಶಂಕರ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ಮಹಿಳೆಗೆ ಕಿರುಕುಳ ನೀಡಿರುವ ವಿಚಾರಕ್ಕೆ ಸಂಬಂಧಿಸಿ ಪ್ರಕರಣ ದಾಖಲಾಗಿದ್ದು, ಈ ವಿಚಾರದಲ್ಲಿ ಪೊಲೀಸರು ಅರ್ಚಕ ರಾಮ್ ಶಂಕರ್ ಅವರನ್ನು ವಿಚಾರಣೆಗೆ ಒಳಪಡಿಸಿದ್ದರು ಇದರಿಂದ ಅರ್ಚಕ ಮನನೊಂದಿದ್ದರು ಎಂದು ಹೇಳಲಾಗಿದೆ.

ಇನ್ನು ದೇವಸ್ಥಾನದ ಒಳಗಿನ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ವೇಳೆ ಅರ್ಚಕ ತಾನು ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು ದಾಸ್ ಅವರು ತಮ್ಮ ಫೇಸ್‌ಬುಕ್ ಲೈವ್‌ನಲ್ಲಿ ರಾಯ್‌ಗಂಜ್ ಪೊಲೀಸ್ ಔಟ್‌ಪೋಸ್ಟ್‌ನ ಉಸ್ತುವಾರಿ ಮತ್ತು ಕಾನ್‌ಸ್ಟೆಬಲ್ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!