July 6, 2026

ಕಾಸರಗೋಡು: ಪೊಲೀಸರಿಗೆ ಬೆದರಿಕೆ ಸೇರಿದಂತೆ ಹಲವು ಪ್ರಕರಣದ ಆರೋಪಿಯ ಬಂಧನ

0
20230502_210008.jpg

ಕಾಸರಗೋಡು: ಹಲವಾರು ಪ್ರಕರಣಗಳ ಆರೋಪಿಯೋರ್ವನನ್ನು ಮಂಜೇಶ್ವರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಉಪ್ಪಳ ಅಟ್ಟೆಗೋಳಿಯ ಅಬ್ದುಲ್ ಹಮೀದ್ ಯಾನೆ ಗುಜರಿ ಅಮ್ಮಿ(38) ಬಂಧಿತ ಆರೋಪಿ.

ಪೊಲೀಸರಿಗೆ ರಿವಾಲ್ವರ್ ತೋರಿಸಿ ಬೆದರಿಸಿದ ಹಾಗೂ ಗಾಂಜಾ ವಶಪಡಿಸಿಕೊಂಡ ಸೇರಿದಂತೆ ಹಲವು ಪ್ರಕರಣಗಳಲ್ಲಿ ವಾರಂಟ್ ಆರೋಪಿಯಾಗಿದ್ದನು. ಕೇರಳ ಹಾಗೂ ಕರ್ನಾಟಕದಲ್ಲಿ ಸುಮಾರು 30 ಕ್ಕೂ ಅಧಿಕ ಪ್ರಕರಣಗಳು ಈತನ ಮೇಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಂಗಳವಾರ ಸಂಜೆ ಬಾಯಾರ್ ಬೆರಿಪದವು ಎಂಬಲ್ಲಿ ಮಂಜೇಶ್ವರ ಪೊಲೀಸರು ಈತನನ್ನು ಬಂಧಿಸಿದ್ದು, ಪೋಲಿಸರಿಗೆ ಲಭಿಸಿದ ಖಚಿತ ಮಾಹಿತಿಯಂತೆ ಈತನನ್ನು ಬಂಧಿಸಲಾಗಿದೆ.

ಪೊಲೀಸ್ ವಾಹನಕ್ಕೆ ಕಾರು ಡಿಕ್ಕಿ ಹೊಡೆಸಿ ಪರಾರಿಯಾಗಲೆತ್ನಿಸಿದರೂ ಬೆನ್ನಟ್ಟಿ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!