March 16, 2026

ತುಂಬೆ ವೆಂಟೆಡ್‌ ಡ್ಯಾಂನಲ್ಲಿ ನೀರಿನ ಪ್ರಮಾಣ ಗಣನೀಯ ಕುಸಿತ: ಮಂಗಳೂರಿಗೆ ನೀರಿನ ರೇಷನಿಂಗ್‌

0
image_editor_output_image1474732376-1683091291148.jpg

ಮಂಗಳೂರು: ಮಂಗಳೂರಿಗೆ ನೀರುಣಿಸುವ ತುಂಬೆ ವೆಂಟೆಡ್‌ ಡ್ಯಾಂನಲ್ಲಿ ನೀರಿನ ಪ್ರಮಾಣ ಗಣನೀಯ ಕುಸಿತವಾಗುತ್ತಿರುವ ಹಿನ್ನೆಲೆಯಲ್ಲಿ ರೇಷನಿಂಗ್‌ ನಿಯಮ ತತ್‌ಕ್ಷಣದಿಂದಲೇ ಜಾರಿಗೆ ದ.ಕ. ಜಿಲ್ಲಾಡಳಿತ ಚಿಂತನೆ ನಡೆಸಿದೆ.

ಮೇ 4 ಅಥವಾ 5ರಿಂದ ಒಂದು ದಿನ ಬಿಟ್ಟು ದಿನ ನೀರು ಸರಬರಾಜು ಮಾಡಲು ಉದ್ದೇಶಿಸಲಾಗಿದ್ದು, ಈ ಕುರಿತ ಅಧಿಕೃತ ಆದೇಶ ಇನ್ನಷ್ಟೇ ಬರಬೇಕಿದೆ.ಮಂಗಳೂರಿಗೆ ನೀರಿನ ಕೊರತೆ ಕಾರಣದಿಂದ ರೇಷನಿಂಗ್‌ ಜಾರಿಗೆ ಸಂಬಂಧಿಸಿ ದ.ಕ. ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಮಂಗಳವಾರ ಮಹತ್ವದ ಸಭೆ ನಡೆಯಿತು.

ನೀರು ಬಳಕೆ ಮಾಡುವ ಎಲ್ಲ ಉದ್ಯಮ ಹಾಗೂ ಕೈಗಾರಿಕೆಗಳಿಗೆ ಪ್ರತ್ಯೇಕ ಮಾರ್ಗಸೂಚಿ ಹೊರಡಿಸುವ ಬಗ್ಗೆ ತೀರ್ಮಾನ ಕೈಗೊಳ್ಳುವ ನಿರೀಕ್ಷೆಯಿದೆ.

Leave a Reply

Your email address will not be published. Required fields are marked *

error: Content is protected !!