ಪುತ್ತೂರು ಮೂಲದ ವಿದ್ಯಾರ್ಥಿನಿ ಬೆಂಗಳೂರಿನಲ್ಲಿ ಆತ್ಮಹತ್ಯೆ
ಪುತ್ತೂರು: ಕೆಯ್ಯೂರು ಗ್ರಾ.ಪಂ ವ್ಯಾಪ್ತಿಯ ಮಾಡಾವು ಮೂಲದ ವಿದ್ಯಾರ್ಥಿನಿಯೋರ್ವಳು ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ವರದಿಯಾಗಿದೆ.
ಮಾಡಾವು ಸ್ಥಾನತ್ತಾರು ಚಂದ್ರಶೇಖರ ರೈ ಮತ್ತು ಸೋಮಾವತಿ ರೈ ದಂಪತಿಯ ಏಕೈಕ ಪುತ್ರಿ, ಬೆಂಗಳೂರಿನಲ್ಲಿ ವಿದ್ಯಾರ್ಥಿನಿಯಾಗಿರುವ ಶೃತಿ(21) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.
ಶೃತಿರವರು ಕಳೆದ ಒಂದು ವರ್ಷದಿಂದ ಬೆಂಗಳೂರಿನಲ್ಲಿ ಕಲಿಯುತ್ತಿದ್ದು ಅಲ್ಲಿಯೇ ವಾಸ್ತವ್ಯ ಹೊಂದಿದ್ದರು ಎನ್ನಲಾಗಿದೆ. ಎ .30 ರಂದು ತನ್ನ ರೂಮ್‌ನಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.




