November 22, 2024

ಮೇ 8ರಿಂದ 10ರವರೆಗೂ ಮದ್ಯ ಅಂಗಡಿ ಬಂದ್

0

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಹಿನ್ನೆಲೆ ರಾಜ್ಯದಲ್ಲಿ 3 ದಿನ ಮದ್ಯ ಮಾರಾಟ ನಿಷೇಧಿಸಲಾಗಿದೆ. ಮೇ 8ರ ಮಧ್ಯರಾತ್ರಿಯಿಂದ ಮೇ10 ರ ಮಧ್ಯರಾತ್ರಿಯವರೆಗೂ ಮದ್ಯ ಅಂಗಡಿಗಳನ್ನು ಬಂದ್ ಮಾಡಲು ಸೂಚಿಸಲಾಗಿದೆ.

ರಾಜ್ಯ ವಿಧಾನಸಭಾ ಚುನಾವಣೆಗೆ ಮೇ 10 ರಂದು ಮತದಾನ ನಡೆಯಲಿದ್ದು, ಮೇ 13ರಂದು ಫಲಿತಾಂಶ ಹೊರ ಬೀಳಲಿದೆ. ಈ ಹಿನ್ನೆಲೆಯಲ್ಲಿ ಶಾಂತಿ ಪಾಲನೆ, ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಮದ್ಯ ಮಾರಾಟ ಹಾಗೂ ಸಾಗಾಟದ ಮೇಲೆ ನಿರ್ಬಂಧ ಹೇರಲಾಗಿದೆ.

ಹೀಗಾಗಿ ಮತದಾನ ದಿನದ ಒಂದು ದಿನ ಮುಂಚೆಯೇ ರಾಜ್ಯದಲ್ಲಿ ಮದ್ಯ ಮಾರಾಟಕ್ಕೆ ನಿಷೇಧ ಹೇರಲಾಗಿದೆ. ಮೇ 13ರಂದು ಫಲಿತಾಂಶ ಇರೋ ಕಾರಣ ಮೇ 12ರ ಮಧ್ಯರಾತ್ರಿಯಿಂದ ಮೇ 13ರ ಮಧ್ಯರಾತ್ರಿಯವರೆಗೂ ಮದ್ಯ ಮಾರಾಟವನ್ನು ನಿಷೇಧಿಸಿದೆ.

Leave a Reply

Your email address will not be published. Required fields are marked *

error: Content is protected !!