February 3, 2026

ಅಂಬ್ಯುಲೆನ್ಸ್ ಖರೀದಿಯಲ್ಲಿ ಕೋಟ್ಯಾಂತರ ರೂ. ಅವ್ಯವಹಾರ ಆರೋಪ:
ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಸೇರಿ 28 ಜನರ ವಿರುದ್ಧ ಲೋಕಾಯುಕ್ತಕ್ಕೆ ದೂರು

0
27-Yediyurappa.jpg

ಬೆಂಗಳೂರು: ಕೋಟ್ಯಾಂತರ ರೂ ಅವ್ಯವಹಾರ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಸೇರಿ 28 ಜನರ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ.

ಕೋವಿಡ್ ವೇಳೆ ಆಂಬುಲೆನ್ಸ್ ಖರೀದಿಗಾಗಿ 821.22 ಕೋಟಿ ಬೃಹತ್ ಮೊತ್ತದ ಹಗರಣ ನಡೆಸಿದ ಆರೋಪ ಹಿನ್ನೆಲೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ , ಸಚಿವರು ಮತ್ತು ಐಎಎಸ್ ಅಧಿಕಾರಿಗಳು ಸೇರಿದಂತೆ ಒಟ್ಟು 28 ಜನರ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ ಎಂದು ತಿಳಿದು ಬಂದಿದೆ.

ಆರ್ಟಿಐ ಕಾರ್ಯಕರ್ತ ಟಿ.ಜೆ.ಅಬ್ರಹಾಂ ಎನ್ನುವವರು ಲೋಕಾಯುಕ್ತಕ್ಕೆ ದೂರು ನೀಡಿದ್ದು, ಚುನಾವಣೆ ಹೊತ್ತಲ್ಲೇ ಯಡಿಯೂರಪ್ಪ ಗೆ ಹೊಸ ಸಂಕಷ್ಟ ಎದುರಾಗಿದೆ.

Leave a Reply

Your email address will not be published. Required fields are marked *

error: Content is protected !!