ಪುತ್ತೂರು: ಪಕ್ಷೇತರ ಅಭ್ಯರ್ಥಿಯಿಂದ ಬಿಜೆಪಿಯ ನಾಯಕರ ಭಾವಚಿತ್ರ ಬಳಕೆ ಆರೋಪ:
ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಅಡಿಯಲ್ಲಿ ದೂರು ದಾಖಲು
ಪುತ್ತೂರು: ಪಕ್ಷೇತರ ಅಭ್ಯರ್ಥಿ ಬಿಜೆಪಿಯ ನಾಯಕರ ಭಾವಚಿತ್ರಗಳನ್ನು ಪ್ರಚಾರದಲ್ಲಿ ಬಳಸಿಕೊಳ್ಳುತ್ತಿದ್ದು, ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿರುವುದಾಗಿ ಬಿಜೆಪಿ ಅಭ್ಯರ್ಥಿಯ ಚುನಾವಣಾ ಎಜೆಂಟ್ ರಾಜೇಶ್ ಬನ್ನೂರು ಚುನಾವಣಾಧಿಕಾರಿಗಳಿಗೆ ದೂರು ನೀಡಿದ್ದಾರೆ.
206 ಪುತ್ತೂರು ವಿಧಾನ ಸಭಾ ಕ್ಷೇತ್ರದಲ್ಲಿ ಕರ್ನಾಟಕ ವಿಧಾನ ಸಭೆಗೆ ಮೇ 10 ರಂದು ಚುನಾವಣೆ ನಡೆಯಲಿದ್ದು, ಭಾರತೀಯ ಜನತಾ ಪಾರ್ಟಿಯಿಂದ ಆಶಾ ತಿಮ್ಮಪ್ಪ ರವರು ಸ್ಪರ್ಧಿಸುತ್ತಿದ್ದಾರೆ.
ಕ್ರಮ ಸಂಖ್ಯೆ 7 ರಲ್ಲಿ ಅರುಣ್ ಕುಮಾರ್ ಪುತ್ತಿಲ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದು, ಅವರಿಗೆ “ಬ್ಯಾಟ್” ಚಿಹ್ನೆಯನ್ನು ನೀಡಲಾಗಿದೆ.
ಆದರೆ ಪಕ್ಷೇತರ ಅಭ್ಯರ್ಥಿಯಾದ ಅರುಣ್ ಕುಮಾರ್ ಪುತ್ತಿಲ ರವರು ಹಾಗೂ ಅವರ ಬೆಂಬಲಿಗರು ಸಾಮಾಜಿಕ ಜಾಲತಾಣದಲ್ಲಿ ಭಾರತೀಯ ಜನತಾ ಪಾರ್ಟಿಯ ನೇತಾರರ ಭಾವಚಿತ್ರಗಳನ್ನು ಬಳಸಿಕೊಂಡು ಪ್ರಚಾರ ಮಾಡುತ್ತಿದ್ದಾರೆ. ಇದು ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆಯಾಗಿರುತ್ತದೆ.
ಭಾರತೀಯ ಜನತಾ ಪಾರ್ಟಿಯ ನಾಯಕರ ಭಾವಚಿತ್ರಗಳನ್ನು ಬಳಸುತ್ತಿದ್ದು, ಇದು ಚುನಾವಣಾ ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆಯಾಗಿರುತ್ತದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಸೂಕ್ತ ಪರಿಶೀಲನೆ ಮಾಡಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿರುವ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಮತ್ತು ಅವರ ಬೆಂಬಲಿಗರ ವಿರುದ್ಧ ಸೂಕ್ತ ಕಾನೂನು ಕ್ರಮಕೈಗೊಳ್ಳುವಂತೆ ದೂರಿನಲ್ಲಿ ತಿಳಿಸಿದ್ದಾರೆ.