February 4, 2026

ಎಸ್‌ಯುವಿ ಕಾರು, ಟ್ರಕ್‌ ನಡುವೆ  ಭೀಕರ ಅಪಘಾತ: ಐವರು ಮಹಿಳೆಯರು, ಇಬ್ಬರು ಮಕ್ಕಳು ಸೇರಿದಂತೆ 11 ಮಂದಿ ಮೃತ್ಯು

0
image_editor_output_image-790958713-1683192705155.jpg

ರಾಯಪುರ: ಎಸ್‌ಯುವಿ ಕಾರು ಟ್ರಕ್‌ವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಐವರು ಮಹಿಳೆಯರು, ಇಬ್ಬರು ಮಕ್ಕಳು ಸೇರಿದಂತೆ 11 ಜನ ಸಾವನ್ನಪ್ಪಿರುವ ಘಟನೆ ಛತ್ತಿಸ್‌ಗಢದ ಬಲೋದ್ ಜಿಲ್ಲೆಯಲ್ಲಿ ಬುಧವಾರ ರಾತ್ರಿ ನಡೆದಿದೆ.

ಮೃತರು ಧಮತರಿ ಜಿಲ್ಲೆಯ ಸೋರಂ-ಭಟ್‌ಗಾಂವ್ ಗ್ರಾಮದ ನಿವಾಸಿಗಳಾಗಿದ್ದು, ಮದುವೆ ನಿಮಿತ್ತ ಕಂಕೇರ್ ಜಿಲ್ಲೆಯ ಮರ್ಕಟೋಲಾ ಗ್ರಾಮಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ.

ಈ ವೇಳೆ ಜಾಗ್ತಾರಾ ಗ್ರಾಮದ ರಾಷ್ಟ್ರೀಯ ಹೆದ್ದಾರಿ-30ರಲ್ಲಿ ಕಾರು ಟ್ರಕ್‌ವೊಂದಕ್ಕೆ ಮುಖಾಮುಖಿಯಾಗಿ ಡಿಕ್ಕಿ ಹೊಡೆದು ಘಟನೆ ಸಂಭವಿಸಿದೆ ಎಂದು ಪುರೂರ್ ಪೊಲೀಸ್ ಠಾಣಾಧಿಕಾರಿ ಅರುಣ್ ಕುಮಾರ್ ಸಾಹು ತಿಳಿಸಿದ್ದಾರೆ.

ಘಟನೆ ಬಳಿಕ ಟ್ರಕ್ ಚಾಲಕ ವಾಹನವನ್ನು ಅಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ಅಪಘಾತದಲ್ಲಿ ಎಸ್‌ಯುವಿ ಕಾರ್‌ನಲ್ಲಿದ್ದ 10 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಒಂದು ಮಗು ಗಂಭೀರ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ವೇಳೆ ಸಾವನ್ನಪ್ಪಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!