February 4, 2026

ರೈಫಲ್‌ನಿಂದ ಗುಂಡು ಹಾರಿಸಿಕೊಂಡು ಪೊಲೀಸ್ ಕಾನ್ ಸ್ಟೇಬಲ್ ಆತ್ಮಹತ್ಯೆ

0
image_editor_output_image-417818512-1683192477678.jpg

ಕಲಬುರಗಿ : ತಹಶೀಲ್ದಾರ್‌ ಕಚೇರಿಯ ಕಟ್ಟಡದ ಮೇಲೆ ಪೊಲೀಸ್‌ ಕಾನ್ಸ್ಟೇಬಲ್‌ ಒಬ್ಬರು ರೈಫಲ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿಯ ಚಿತ್ತಾಪುರ ಪಟ್ಟಣದಲ್ಲಿ ಇಂದು ಮುಂಜಾನೆ ನಡೆದಿದೆ.

ಸ್ಥಳೀಯ ಪೊಲೀಸ್‌ ಠಾಣೆಯ ಕಾನ್‌ಸ್ಟೇಬಲ್‌ ಮಲ್ಲಿಕಾರ್ಜುನ ಎಂಬುವವರು ಮೃತಪಟ್ಟವರು ಎಂದು ತಿಳಿದು ಬಂದಿದೆ.

ರಾತ್ರಿ ಪಾಳಿಯಲ್ಲಿ ಕರ್ತವ್ಯದಲ್ಲಿದ್ದ ಮಲ್ಲಿಕಾರ್ಜುನ ಬೆಳಗಿನ ಜಾವ ಮೂರು ಗಂಟೆಗೆ ತಹಶೀಲ್ದಾರ್‌ ಕಚೇರಿಗೆ ಬಂದಿದ್ದಾರೆ.

ಜೊತೆಯಲ್ಲಿದ್ದವರಿಗೆ ಸ್ವಲ್ಪ ಮೇಲೆ ಹೋಗಿ ಬರುತ್ತೇನೆ ಎಂದು ಕಟ್ಟಡದ ಮೇಲೆ ಹೋಗಿದ್ದು, ನಂತರ ಅವರ ಮೊಬೈಲಿಗೆ ಕರೆ ಮಾಡಿದಾಗ ಕರೆಯನ್ನು ಸ್ವೀಕರಿಸದಿದ್ದಾಗ ನಿದ್ದೆ ಮಾಡುತ್ತಿರಬೇಕು ಎಂದು ಜೊತೆಯಲ್ಲಿದ್ದವರು ಸುಮ್ಮನಾಗಿದ್ದರು.

ಮುಂಜಾನೆ ಕಚೇರಿಯ ಸ್ವಚ್ಛತಾ ಸಿಬ್ಬಂದಿ ಕಟ್ಟಡದ ಮೇಲೆ ಬಂದಾಗ ಈ ಘಟನೆ ನಡೆದಿರುವುದು ಬೆಳಕಿಗೆ ಬಂದಿರುತ್ತದೆ.

ಸುದ್ದಿ ತಿಳಿಯುತ್ತಿದ್ದಂತೆ ಸ್ಥಳೀಯ ಪೊಲೀಸ್‌ ಠಾಣೆಯ ವೃತ್ತ ನಿರೀಕ್ಷಕ ಶಿವಾನಂದ ಅಂಬಿಗೇರ, ಪಿಎಸ್‌ಐ ನಂದಕುಮಾರ, ತಹಶೀಲ್ದಾರ್‌ ಷಾಷಾವಲಿ ಘಟನಾ ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!