February 4, 2026

ಡಿಕೆ ಶಿವಕುಮಾರ್ ಬಂದಿಳಿದ ಹೆಲಿಪ್ಯಾಡ್ ಬಳಿ ಬೆಂಕಿ ಅವಘಡ

0
Screenshot_20230504_143826-1024x563.png

ಉತ್ತರ ಕನ್ನಡ: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಂಚರಿಸುತ್ತಿದ್ದ ಹೆಲಿಕಾಪ್ಟರ್ ಗೆ ಹದ್ದು ಡಿಕ್ಕಿಯಾದ ಘಟನೆ ಇನ್ನೂ ಹಸಿಯಾಗಿರುವಾಗಲೇ ಇಂದು ಅವರು ಬಂದಿಳಿದ ಹೆಲಿಪ್ಯಾಡ್ ಬಳಿ ಬೆಂಕಿ ಕಾಣಿಸಿಕೊಂಡಿದೆ. ಹೊನ್ನಾವರದ ರಾಮತೀರ್ಥ ಬಳಿಯ ಹೆಲಿಪ್ಯಾಡ್ ನಲ್ಲಿ ಗುರುವಾರ ಬೆಂಕಿ ಕಾಣಿಸಿಕೊಂಡಿದೆ.

ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ  ರಾಮತೀರ್ಥ ಬಳಿಯ ಹೆಲಿಪ್ಯಾಡ್ ನಲ್ಲಿ ಗುರುವಾರ ಬೆಂಕಿ ಕಾಣಿಸಿಕೊಂಡಿದೆ. ಮೈಸೂರಿನಿಂದ ಹೊನ್ನಾವರಕ್ಕೆ ಹೆಲಿಕಾಪ್ಟರ್ ನಲ್ಲಿ ತೆರಳಿದ್ದ ಡಿ.ಕೆ ಶಿವಕುಮಾರ್ ಅವರು ರಾಮತೀರ್ಥದ ಹೆಲಿಪ್ಯಾಡ್ ಗೆ ಬಂದಿಳಿದರು. ಈ ವೇಳೆ, ಹೆಲಿಪ್ಯಾಡ್ ನ ಬಳಿಯ ಹುಲ್ಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಹೆಲಿಕಾಪ್ಟರ್ ಗೆ ಸಿಗ್ನಲ್ ಕೊಡುವ ಸ್ಮೋಕ್ ಕ್ಯಾಂಡಲ್ ನಿಂದ ಬೆಂಕಿ ಆವರಿಸಿದೆ ಎಂದು ಹೇಳಲಾಗುತ್ತಿದೆ. ಹುಲ್ಲಿಗೆ ಹೊತ್ತಿಕೊಂಡ ಬೆಂಕಿಯನ್ನು ಕೂಡಲೇ ಸಿಬ್ಬಂದಿ ಆರಿಸಿದ್ದು, ಬಾರೀ ದುರಂತ ತಪ್ಪಿದೆ. ಅದೃಷ್ಟವಶಾತ್ ಹೆಲಿಕಾಪ್ಟರ್ ನಲ್ಲಿ ಇದ್ದವರಿಗೆ ಯಾವುದೇ ಹಾನಿಯಾಗಿಲ್ಲ.

ತಕ್ಷಣ ಸ್ಥಳದಲ್ಲಿದ್ದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿ ಆಗಬಹುದಾದ ದುರ್ಘಟನೆಯನ್ನು ತಡೆದಿದ್ದಾರೆ.
ಇಂದು ಹೊನ್ನಾವರದ ಸೆಂಟ್ ಥಾಮಸ್ ಸಭಾಂಗಣದ ಆವರಣದಲ್ಲಿ ಅಭ್ಯರ್ಥಿಗಳ ಪರ ಮತ ಪ್ರಚಾರ ಸಭೆ ಆಯೋಜಿಸಲಾಗಿತ್ತು. ಈ ಸಭೆಗೆ ಮೈಸೂರಿನಿಂದ ಹೊನ್ನಾವರಕ್ಕೆ ಹೆಲಿಕಾಪ್ಟರ್ ನಲ್ಲಿ ಡಿಕೆಶಿ ಪ್ರಯಾಣಿಸಿದ್ದರು.

ಮಂಗಳವಾರ ಡಿಕೆ ಶಿವಕುಮಾರ್ ಅವರು ಜಕ್ಕೂರು ವಿಮಾನ ನಿಲ್ದಾಣದಿಂದ ಮುಳಬಾಗಿಲಿಗೆ ತೆರಳುತ್ತಿದ್ದಾಗ ಹೆಲಿಕಾಪ್ಟರ್ ಗೆ ಹದ್ದು ಡಿಕ್ಕಿ ಹೊಡೆದಿತ್ತು. ಪರಿಣಾಮವಾಗಿ ಹೆಲಿಕಾಪ್ಟರ್ ಮುಂಭಾಗದ ಗಾಜು ಪುಡಿಪುಡಿಯಾಗಿತ್ತು.

Leave a Reply

Your email address will not be published. Required fields are marked *

error: Content is protected !!