ಕೆಟ್ಟು ನಿಂತಿದ್ದ ಲಾರಿಗೆ ಹಿಂಬದಿಯಿಂದ ಬೈಕ್ ಢಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
ಬೆಂಗಳೂರು: ರಾತ್ರಿ ಫುಡ್ ಡೆಲಿವರಿ ಕೊಡಲು ಹೋಗುತ್ತಿದ್ದಾಗ ಕೆಟ್ಟು ನಿಂತಿದ್ದ ಲಾರಿಗೆ ಹಿಂಬದಿಯಿಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೈಕ್ ಚಲಾಯಿಸುತ್ತಿದ್ದ ಸ್ವಿಗ್ಗಿ ಡೆಲಿವರಿ ಬಾಯ್ ಮೃತ ದೇಹ ಲಾರಿ ಹಿಂಬದಿ ನೇತಾಡುತ್ತಿತ್ತೆಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ.
ಬೆಂಗಳೂರಿನ ಕಾಮಾಕ್ಷಿಪಾಳ್ಯ ಸಂಚಾರಿ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ರಾತ್ರಿ 12.30 ಗಂಟೆಯ ಸುಮಾರಿಗೆ ಅಪಘಾತ ಸಂಭವಿಸಿದೆ.
ಸ್ವಿಗ್ಗಿ ಡೆಲಿವರಿ ಬಾಯ್ ನಾಗಪ್ಪ (31) ಸಾವನ್ನಪ್ಪಿರುವ ಬೈಕ್ ಸವಾರ.
ಬೆಂಗಳೂರಿನ ಹೆಗ್ಗನಹಳ್ಳಿ ಕ್ರಾಸ್‌ನಲ್ಲಿರುವ ತಮ್ಮ ಮಾವನ ಮನೆಯಲ್ಲಿ ವಾಸವಿದ್ದ ನಾಗಪ್ಪ ಸ್ವಿಗ್ಗಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದರು.
ನಿನ್ನೆ ರಾತ್ರಿ ಫುಡ್ ಡೆಲಿವರಿ ಕೊಡಲು ಹೋಗುತ್ತಿದ್ದಾಗ ನಿಂತಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದು ಮೃತಪಟ್ಟಿದ್ದಾರೆ.
ಡಿಕ್ಕಿ ಹೊಡೆದ ರಭಸಕ್ಕೆ ಮೃತದೇಹ ಲಾರಿಯ ಹಿಂಭಾಗದಲ್ಲಿ ನೇತಾಡುತ್ತಿತ್ತು.
ಘಟನೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಕಾಮಾಕ್ಷಿಪಾಳ್ಯ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




