March 24, 2026

ಮಂಗಳೂರು: ತಲೆಮರೆಸಿಕೊಂಡಿದ್ದ ಆರೋಪಿ ವಿಮಾನ ನಿಲ್ದಾಣದಲ್ಲಿ ಸೆರೆ

0
IMG-20230504-WA0062.jpg

ಮಂಗಳೂರು: ಬಂದರು ಮತ್ತು ಪಾಂಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ 12 ವಿವಿಧ ಪ್ರಕರಣಗಳಿಗೆ ಸಂಬಂಧಿಸಿದ ಆರೋಪ ಎದುರಿಸುತ್ತಿರುವ ಮತ್ತು 2019ರ ಡಿಸೆಂಬರ್‌ನಲ್ಲಿ ನಡೆದ ಸಿಎಎ/ಎನ್‌ಆರ್‌ಸಿಗೆ ಸಂಬಂಧಿಸಿದ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಕಸಾಯಿಗಲ್ಲಿಯ ಮುಹಮ್ಮದ್ ರಿಯಾಝ್ ಯಾನೆ ರೀಮಾ (28) ಬಂಧಿತ ಆರೋಪಿ.

ಆರೋಪಿಯು ಘಟನೆ ನಡೆದ ಬಳಿಕ ವಿದೇಶಕ್ಕೆ ತೆರಳಿದ್ದು, ಗುರುವಾರ ದುಬೈಯಿಂದ ಆಗಮಿಸುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ಆರೋಪಿಯನ್ನು ವಿಮಾನ ನಿಲ್ದಾಣದಿಂದಲೇ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!