ಬಿಜೆಪಿ ಅಭ್ಯರ್ಥಿಯ ಪುತ್ರನ ವಿರುದ್ಧ FIR ದಾಖಲು
ವಿಜಯಪುರ: ಬಿಜೆಪಿ ಟಿಕೆಟ್ ಘೋಷಣೆ ಹಿನ್ನೆಲೆಯಲ್ಲಿ ಸಂಭ್ರಮಾಚರಣೆ ವೇಳೆ ಗಾಳಿಯಲ್ಲಿ ಗುಂಡು ಹಾರಿಸಿದ್ದ ಸಮರ್ಥ ಪಾಟೀಲ್ ವಿರುದ್ಧ ಗಾಂಧಿ ಚೌಕ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಜಿಲ್ಲೆಯ ಬಬಲೇಶ್ವರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಜಯಕುಮಾರ್ ಪಾಟೀಲ್ ಅವರಿಗೆ ಟಿಕೆಟ್ ಘೋಷಣೆ ಮಾಡಿದ ದಿನ ಅವರ ಪುತ್ರ ಸಮರ್ಥ ಪಾಟೀಲ್ ಗಾಳಿಯಲ್ಲಿ ಗುಂಡು ಹಾರಿಸಿದ್ದಾನೆ. ಈ ಬಗ್ಗೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ರಾಜು ಆಲಗೂರ ಆರೋಪಿಸಿದ್ದರು
ಇದರ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಪೊಲೀಸ್ ಇಲಾಖೆ ಸಮರ್ಥ ವಿರುದ್ಧ ಪ್ರಕರಣ ದಾಖಲಿಸಿದೆ.




