ಚಾಕುವಿನಿಂದ ಪತ್ನಿಯ ಕತ್ತು ಸೀಳಿ ಕೊಲೆಗೈದ ಪತಿ
ಮಂಡ್ಯ: ಪತಿಯೊಬ್ಬ ತನ್ನ ಪತ್ನಿಯನ್ನು ಚಾಕುವಿನಿಂದ ಕತ್ತು ಸೀಳಿದ ಘಟನೆ ಮಂಡ್ಯದ ಯಲಿಯೂರು ಗೇಟ್ ಬಳಿ ನಡೆದಿದೆ.
ಮನುಜ (30) ಮೃತ ದುರ್ದೈವಿ ಆಗಿದ್ದು, ರಾಮಚಂದ್ರ (38) ಹತ್ಯೆ ಮಾಡಿದ ಆರೋಪಿಯಾಗಿದ್ದಾನೆ.
ಮನುಜ ಹಾಗೂ ರಾಮಚಂದ್ರ ನಡುವೆ ಕೌಟುಂಬಿಕಕ್ಕೆ ಸಂಬಂಧಪಟ್ಟಂತೆ ಆಗಾಗ ಗಲಾಟೆ ನಡೆಯುತಿತ್ತು.
ಶುಕ್ರವಾರ ಬೆಳಿಗ್ಗೆ ಮಾತಿಗೆ ಮಾತು ಬೆಳೆದು ಜಗಳ ಶುರುವಾಗಿದೆ. ಜಗಳ ಅತಿರೇಕಕ್ಕೆ ತಿರುಗಿದ್ದು, ರಾಮಚಂದ್ರ ಸಿಟ್ಟಿಗೆದ್ದವನೆ ಹಲ್ಲೆ ನಡೆಸಿ ಚಾಕುವಿನಿಂದ ಪತ್ನಿಯ ಕತ್ತು ಸೀಳಿ ಹತ್ಯೆ ಮಾಡಿದ್ದಾನೆ ಎಂದು ತಿಳಿದು ಬಂದಿದೆ.
ಮಂಡ್ಯ ಗ್ರಾಮಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಆಗಮಿಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
ಈ ಪ್ರಕರಣ ದಾಖಲಿಸಿಕೊಂಡಿದ್ದು, ಪತ್ನಿ ಕೊಲೆಗೈದ ಅರೋಪಿ ರಾಮಚಂದ್ರನನ್ನು ಬಂಧಿಸಲಾಗಿದೆ.




