February 4, 2026

ನಟ ಕಿಚ್ಚ ಸುದೀಪ್ ಗೆ ಬೆದರಿಕೆ ಪತ್ರ ಬರೆದಿದ್ದ ವ್ಯಕ್ತಿಯ ಬಂಧನ

0
image_editor_output_image1071429094-1683348232250.jpg

ಬೆಂಗಳೂರು: ಸ್ಯಾಂಡಲ್ ವುಡ್ ನಟ ಕಿಚ್ಚ ಸುದೀಪ್ ಗೆ ಬೆದರಿಕೆ ಪತ್ರ ಬರೆದಿದ್ದ ವ್ಯಕ್ತಿಯ ಬಂಧನವಾಗಿದೆ.

ಹಲವು ದಿನಗಳಿಂದ ಆರೋಪಿಯ ಬೆನ್ನು ಹತ್ತಿದ್ದ ಪೊಲೀಸರು ಕೊನೆಗೂ ಅರೆಸ್ಟ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ಬೆದರಿಕೆ ಪತ್ರದ ಹಿಂದೆ ಡೈರೆಕ್ಟರ್ ಒಬ್ಬರ ಕೈವಾಡವಿದೆ ಎಂದು ಹೇಳಲಾಗುತ್ತಿದೆ. ಸದ್ಯ ರಮೇಶ್ ಕಿಟ್ಟಿ ಎನ್ನುವವರನ್ನು ಪೊಲೀಸರು ಬಂಧಿಸಿದ್ದಾರೆ.
ಹಣಕಾಸಿನ ವೈಷಮ್ಯವೇ ಬೆದರಿಕೆ ಪತ್ರಕ್ಕೆ ಕಾರಣವೆಂದು ಸ್ವತಃ ರಮೇಶ್ ಕಿಟ್ಟಿನೇ ಒಪ್ಪಿಕೊಂಡಿದ್ದಾನೆಂದು ಹೇಳಲಾಗುತ್ತಿದೆ. ಅಲ್ಲದೇ, ಈ ಪ್ರಕರಣದ ಹಿಂದೆ ಇನ್ನೂ ಹಲವರು ಇದ್ದಾರೆಂದು ಶಂಕಿಸಲಾಗುತ್ತಿದೆ.

ಬೆದರಿಕೆ ಪತ್ರದ ಪ್ರಕರಣದ ಹಿಂದೆ ಯಾರಿದ್ದಾರೆ ಎಂಬುದು ನನಗೆ ಗೊತ್ತಿದೆ ಎಂದು ಮೊನ್ನೆಯಷ್ಟೇ ಸುದೀಪ್ ಹೇಳಿದ್ದರು. ಸಿನಿಮಾ ರಂಗದವರೇ ಈ ಪ್ರಕರಣದಲ್ಲಿ ಭಾಗಿಯಾಗಿದ್ದು, ಕಾನೂನು ಮೂಲಕವೇ ಅವರಿಗೆ ಉತ್ತರ ಕೊಡುತ್ತೇನೆ ಎಂದೂ ಹೇಳಿಕೊಂಡಿದ್ದರು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿಟ್ಟಿ ಬಂಧನವಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!