July 6, 2026

ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ರೋಡ್‌ ಶೋ ಆರಂಭಿಸಿದ ಯೋಗಿ ಆದಿತ್ಯನಾಥ್

0
IMG-20230506-WA0012.jpg

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಪರ ಚುನಾವಣಾ ಪ್ರಚಾರದ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪುತ್ತೂರಿಗೆ ಆಗಮಿಸಿದ್ದು, ಮಹಾಲಿಂಗೇಶ್ವರ ದೇವಾಲಯದ ಬಳಿಯಿಂದ ರೋಡ್‌ ಶೋ ಆರಂಭಗೊಂಡಿದೆ.

ಗರದ ಹೊರವಲಯದಲ್ಲಿರುವ ಮೊಟ್ಟೆತ್ತಡ್ಕ ಹೆಲಿಪ್ಯಾಡ್‌ ನಿಂದ ವಾಹನದ ಮೂಲಕ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಯೋಗಿ ಆದಿತ್ಯನಾಥ್‌ ಆಗಮಿಸಿ ಶ್ರೀ ಮಹಾಲಿಂಗೇಶ್ವರ ದೇವರ ದರ್ಶನ ಪಡೆದಿದ್ದಾರೆ.

ಇನ್ನು ದೇವಳದ ಬಳಿ ಮತ್ತು ರಸ್ತೆ ಇಕ್ಕೆಲಗಳಲ್ಲಿ ಜನಸಾಗರ ಯೋಗಿಯತ್ತ ಕೈ ಬೀಸಿ ಸಂಭ್ರಮಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!