March 16, 2026

ಬೆಳ್ತಂಗಡಿ: ರಸ್ತೆ ಬದಿಯ ಬರೆಗೆ ಢಿಕ್ಕಿಯಾದ ಖಾಸಗಿ ಬಸ್: ಮಹಿಳೆ ಮೃತ್ಯು, ಐವರು ಪ್ರಯಾಣಿಕರಿಗೆ ಗಾಯ

0
IMG-20230507-WA0035.jpg

ಬೆಳ್ತಂಗಡಿ: ಖಾಸಗಿ ಬಸ್ಸೊಂದು ರಸ್ತೆ ಬದಿಯ ಬರೆಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಮಹಿಳೆ ಸಾವನ್ನಪ್ಪಿ, ಐವರು ಪ್ರಯಾಣಿಕರು ಗಾಯಗೊಂಡಿರುವ ಘಟನೆ ತಾಲೂಕಿನ ನಾವೂರು ಬಳಿ ಶನಿವಾರ ನಡೆದಿದೆ.

ಮೃತರನ್ನು ಇಂದಬೆಟ್ಟು ಗ್ರಾಮದ ಸುಂದರಿ (60) ಎಂದು ಗುರುತಿಸಲಾಗಿದೆ.

ಗಾಯಗೊಂಡಿರುವ ಐವರು ಪ್ರಯಾಣಿಕರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತ ಸ್ಥಳಕ್ಕೆ ಬೆಳ್ತಂಗಡಿ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!